ಬಿ.ಸಿ.ರೋಡ್: ಬಂಟ್ವಾಳ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಸಂದರ್ಭ ಬಂಟ್ವಾಳ ತಾಲೂಕು ತಹಶೀಲ್ದಾರ್ ಪುರಂದರ ಹೆಗ್ಡೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ , ಪುರಸಭೆ ಅಧ್ಯಕ್ಷರಾದ ರಾಮಕೃಷ್ಣ ಆಳ್ವ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಆಲಿ, ಪುರಸಭೆ ಉಪಾಧ್ಯಕ್ಷರಾದ ಮಹಮ್ಮದ್ ನಂದರಬೆಟ್ಟು ಉಪಸ್ಥಿತರಿದ್ದರು.
ನಂತರ ಪೊಲೀಸ್, ಗೃಹ ರಕ್ಷಕ ದಳ,ಎನ್.ಸಿ.ಸಿ, ಭಾರತ ಸೇವಾದಳ, ಸ್ಕೌಟ್ ಗೈಡ್ಸ್, ಕಬ್ ಗೈಡ್ಸ್ ಬುಲ್ ಬುಲ್ ವಿವಿಧ ತುಕಡಿಗಳ ಪಥ ಸಂಚಲನ ನಡೆಯಿತು.
ಬಂಟ್ವಾಳ ಪುರಸಭೆ ವ್ಯಾಪ್ತಿಯ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕನ್ನಡ ರಾಜ್ಯೋತ್ಸವ ದಿನಾಚರಣೆಯ ಮಹತ್ವದ ಬಗ್ಗೆ ತಹಶೀಲ್ದಾರ್ ಪುರಂದರ ಹೆಗ್ಡೆ ಮಾತನಾಡಿದರು.
ಪ್ರಧಾನ ಭಾಷಣಕಾರರಾಗಿ ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ್ ಮಾತನಾಡಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹನಾಧಿಕಾರಿ ಸಿಪ್ರಿಯಾನ ಮಿರಾಂದ, ಕಂದಾಯ ಇಲಾಖೆಯ ಉಪ ತಹಶೀಲ್ದಾರ್ ಗಳದ ಭಾಸ್ಕರ್. ಪರಮೇಶ್ವರ ನಾಯ್ಕ್ . ಲಲಿತ ಶೆಟ್ಟಿ, ವಾಸು ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ಸುಧಾಕರ್. ಕಂದಾಯ ನಿರೀಕ್ಷಕರಾದ ದಿವಾಕರ್, ನವೀನ್, ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ, ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವಿಷಯ ನಿರ್ವಾಹಕ ವಿಶು ಕುಮಾರ್, ಪದ್ಮನಾಭ ನರಿಂಗಾನ ಉಪಸ್ಥಿತರಿದ್ದರು.