ಅಯ್ಯಪ್ಪ ಭಕ್ತವೃಂದದಿಂದ ಅಕ್ಕಿ ವಿತರಣಾ ಕಾರ್ಯ

ಬಂಟ್ವಾಳ: ಅಯ್ಯಪ್ಪ ವೃತಧಾರಿ ಬೆಂಗಳೂರಿನ ವರದರಾಜ ಗುರುಸ್ವಾಮಿ ಶ್ರದ್ಧಾಂಜಲಿ ಪ್ರಯುಕ್ತ ಅವರ ಭಕ್ರವೃಂದದಿಂದ ಅಕ್ಕಿ ವಿತರಣಾ ಕಾರ್ಯಕ್ರಮ ಗುರುವಾರ ಬೋಳಂತೂರಿನ ತುಳಸಿವನ ಸಿದ್ಧಿ ವಿನಾಯಕ ಭಜನಾ ಮಂದಿರ ವಠಾರದಲ್ಲಿ ನಡೆಯಿತು.

ಈ ಸಂಬಂಧ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಬಂಟ್ವಾಳ ಎಪಿಎಂಸಿ ಮಾಜಿ ಅಧ್ಯಕ್ಷ ನೇಮಿರಾಜ ಶೆಟ್ಟಿ, ವಿಶ್ವಸ್ಥ ಮಂಡಳಿ ಅಧ್ಯಕ್ಷ ವೆಂಕಟರಮಣ ಬಳ್ಕೂರಾಯ, ನಿವೃತ್ತ ಶಿಕ್ಷಕ ಶಂಕರ ವಿ, ಪ್ರಮುಖರಾದ ಮುತ್ತಪ್ಪ ಮೂಲ್ಯ, ಸಿದ್ಧಿ ವಿನಾಯಕ ಭಜನಾ ಮಂದಿರದ ಅಧ್ಯಕ್ಷ ಸಂಕಪ್ಪ ಮೂಲ್ಯ, ಸದಸ್ಯ ಭಾಸ್ಕರ ಕಯ್ಯ, ಉದಯ ಕುಮಾರ್ ತುಳಸೀವನ, ನಾರಯಾಣ ಮೂಲ್ಯ ಹಾಜರಿದ್ದು ಸಂತಾಪ ಸೂಚಿಸಿದರು.

ಬಳಿಕ ಸ್ಥಳೀಯ ಬಡವರ್ಗದ ಜನರಿಗೆ ತಲಾ 25 ಕೆ.ಜಿ.ಯಂತೆ ಅಕ್ಕಿಯನ್ನು ಅತಿಥಿಗಳು ವಿತರಿಸಿದರು. ಗುರುಸ್ವಾಮಿಯವರು ಬೆಂಗಳೂರಿನಲ್ಲಿ ವಾಸ್ತವ್ಯವಿದ್ದರೂ ಅಯ್ಯಪ್ಪ ವೃತಧಾರಿಗಳಾದ ಸಂದರ್ಭ ಇಲ್ಲಿಗೆ ಆಗಮಿಸಿ ಗುರುಸ್ವಾಮಿಯಾಗಿ ಎಲ್ಲಾ ಅಯ್ಯಪ್ಪ ವೃತಧಾರಿಗಳಾಗಿ ಮಾರ್ಗದರ್ಶನ ಮಾಡುತ್ತಿದ್ದರು.

ಜಾಹೀರಾತು

ಅವರ ಅಗಲುವಿಕೆ ನೋವು ಉಂಟುಮಾಡಿದ್ದು ಅವರ ಸಂಸ್ಮರಣೆಯಾಗಿ ಭಕ್ತವೃಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಅಭಿನಂದನೀಯ ಎಂದರು. ಧನು ಕುಲಾಲ್ ಬೋಳಂತೂರು ಸ್ವಾಗತಿಸಿ, ರವೀಶ್ ನಿರೂಪಿಸಿ ವಂದಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅಯ್ಯಪ್ಪ ಭಕ್ತವೃಂದದಿಂದ ಅಕ್ಕಿ ವಿತರಣಾ ಕಾರ್ಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*