ಬಂಟ್ವಾಳ: ಇಲ್ಲಿನ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಗುರುವಾರ ಬೆಳಿಗ್ಗೆ ಅಪರಿಚಿತ ಶವಗಳು ಪತ್ತೆಯಾಗಿದೆ. ಮೊಡಂಕಾಪು ಬಳಿ ರಸ್ತೆ ಪಕ್ಕದ ಚರಂಡಿಯಲ್ಲಿ ಅಪರಿಚಿತ ಯುವಕನೋರ್ವನ ಶವವು ಕೆಳಮುಖ ಮಾಡಿದ ಸ್ಥಿತಿಯಲ್ಲಿ ಕಂಡು ಬಂದಿದ್ದು ಸಾರ್ವಜನಿಕರು ಈ ಬಗ್ಗೆ ಠಾಣೆಗೆ ದೂರು ನೀಡಿದ್ದರು.
ಪೊಲೀಸರು ಸ್ಥಳಕ್ಕಗಮಿಸಿ ಶವವನ್ನು ಮೇಲಕೆತ್ತಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಿದ್ದರೆ. ವಾರಸುದಾರಿದ್ದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಬಿ.ಸಿ.ರೋಡು ಖಾಸಗಿ ಬಸ್ಸು ನಿಲ್ದಾಣದಲ್ಲಿ ಅನಾಥ ಭಿಕ್ಷುಕನೊಬ್ಬನ ಶವವು ಪತ್ತೆಯಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪುರಸಭೆಯ ವತಿಯಿಂದ ಶವಧಪನ ನಡೆಸಲಾಯಿತು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…