ವಿಟ್ಲ

ರಾಷ್ಟ್ರಮಟ್ಟದಲ್ಲಿ ಮಿಂಚಿದ ವಿಟ್ಲದ ಸಾಧಕರು

ಬಂಟ್ವಾಳ: ಬಂಟ್ವಾಳ ತಾಲೂಕಿನ ಮೂವರು ಪ್ರತಿಭಾವಂತರು ವಿವಿಧ ಕ್ರೀಡಾಕೂಟಗಳಲ್ಲಿ ಸ್ಪರ್ಧಿಸಿ ಜಯಶಾಲಿಯಾಗಿರುತ್ತಾರೆ.
ತಾಲೂಕಿನ ವಿಟ್ಲ ಮೂಡ್ನೂರು ಗ್ರಾಮದ ಅಬೀರಿ ದಯಾನಂದ ಶೆಟ್ಟಿ ಮತ್ತು ಜ್ಯೋತಿ ಡಿ ಶೆಟ್ಟಿ ಯವರ ಮಕ್ಕಳಾದ ಭರತ್ ಡಿ ಶೆಟ್ಟಿ ಕಬಡ್ಡಿಯಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿರುತ್ತಾನೆ ಮತ್ತು ಮಂಗಳೂರು ವಿಶ್ವ ವಿದ್ಯಾನಿಲಯದಿಂದ ದಕ್ಷಿಣ ವಲಯ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾನೆ.

ಜಾಹೀರಾತು

ದೀಕ್ಷಿತ್ ಡಿ ಶೆಟ್ಟಿ ಶಟ್ಲ್ ಬ್ಯಾಡ್ಮಿಂಟನ್ ಮತ್ತು ವಾಲಿಬಾಲ್ ಪಂದ್ಯಾಟದಲ್ಲಿ ಸತತ ಆರು ಬಾರಿ ರಾಜ್ಯ ಮಟ್ಟದಲ್ಲಿ ಭಾಗವಹಿಸಿ. ಒಂದು ಬಾರಿ ರಾಷ್ಟ್ರ ಮಟ್ಟದಲ್ಲಿ ಕಂಚಿನ ಪದಕ ಪಡೆದಿರುತ್ತಾನೆ.

ಶ್ರೇಯ ಡಿ ಶೆಟ್ಟಿ ಶಟ್ಲ್ ಬ್ಯಾಡ್ಮಿಂಟನ್ ಮತ್ತು ಡಿಸ್ಕಸ್ ತ್ರೋ ನಲ್ಲಿ ಆರು ಬಾರಿ ರಾಜ್ಯ ಮಟ್ಟ ದಲ್ಲಿ ಭಾಗವಹಿಸಿ, ಮೂರುಬಾರಿ ರಾಷ್ಟ್ರ ಮಟ್ಟದಲ್ಲಿ ಸ್ಪರ್ದಿಸಿ ಒಂದು ಬಾರಿ ಬೆಳ್ಳಿ ಪದಕಗಳಿಸಿರುತ್ತಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts