ಕಲ್ಲಡ್ಕ

ಹಕ್ಕುಪತ್ರ ನೀಡುವ ಕಾಯ್ದೆಗೆ ತಿದ್ದುಪಡಿ: ಸಚಿವರಿಗೆ ಅಭಿನಂದನೆ

ಕೊಳ್ನಾಡು: 94 ಸಿಯಲ್ಲಿ ಅರ್ಜಿ ಸಲ್ಲಿಸಿದ ಅರಣ್ಯ ಜಮೀನಿನ ಪಕ್ಕದ ಸುರಕ್ಷತಾ ವಲಯದ (ಬಫ್ಫರ್) 100 ಮೀಟರ್ ವ್ಯಾಪಿಯೊಳಗಡೆ ಮನೆಕಟ್ಟಿ ವಾಸಿಸುತ್ತಿರುವವರಿಗೆ ಹಕ್ಕುಪತ್ರ ನೀಡಲು ಅರಣ್ಯ ಕಾಯ್ದೆಯಿಂದ ಸೆಕ್ಷನ್ 41(2) ನಿಯಮದಡಿ ಈ ಹಿಂದೆ ಅವಕಾಶವಿಲ್ಲದೆ ಅನೇಕ ಜನ 94ಸಿ ಯೋಜನೆಯಿಂದ ವಂಚಿತರಾಗಿದ್ದರು. ಇದನ್ನು ಮನಗಂಡು ಅರಣ್ಯ ಸಚಿವರಾದ ಬಿ ರಮಾನಾಥ ರೈ ಈ ಕಾಯ್ದೆಗೆ ತಿದ್ದುಪಡಿ ತಂದು ಈ ವ್ಯಾಪ್ತಿಯೊಳಗಡೆ ಬರುವ ಮನೆಗಳಿಗೂ ಅರಣ್ಯ ಇಲಾಖೆಯ ನಿರಾಕ್ಷೇಪಣಾ ಪತ್ರ ಪಡೆದು ಹಕ್ಕುಪತ್ರ ಪಡೆಯುವ ಅವಕಾಶವನ್ನು ಮಾಡಿ ಕೊಟ್ಟಿರುತ್ತಾರೆ ಎಂದು ಕೊಳ್ನಾಡು ಗ್ರಾಪಂ ಅಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಹೇಳಿದ್ದಾರೆ.
ಈಗಾಗಲೇ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಸಂಬಂಧಪಟ್ಟವರನ್ನು ಸಂಪರ್ಕಿಸಿ ಪ್ರಯೋಜನೆ ಪಡೆದುಕೊಳ್ಳಬೇಕಾಗಿ ವಿನಂತಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts