ಬಂಟ್ವಾಳ ಪುರಸಭೆಗೆ ಚುರುಕು ಮುಟ್ಟಿಸಿದ ಜಿಲ್ಲಾಧಿಕಾರಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಜಗದೀಶ್, ಬಂಟ್ವಾಳ ಪುರಸಭೆಗೆ ಸೋಮವಾರ ಸಂಜೆ ಭೇಟಿ ನೀಡಿ, ಅಧಿಕಾರಿಗಳ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು.

unnamed-1

ಈ ಸಂದರ್ಭ ಪುರಸಭಾ ವ್ಯಾಪ್ತಿಗೊಳಪಡುವ ಪ್ರದೇಶದ ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ ಅವರು, ವಾರದೊಳಗೆ ಬಸ್ ಬೇ ಕುರಿತ ಸರ್ವೇ, ನದಿಗೆ ಅಕ್ರಮವಾಗಿ ತ್ಯಾಜ್ಯ ಎಸೆಯುವವರ ವಿರುದ್ಧ ಕಠಿಣ ಕ್ರಮ, ಅಕ್ರಮ ಕಟ್ಟಡಗಳು, ಅನಧಿಕೃತವಾಗಿ ಹಾಗೂ ನಿಯಮಬಾಹಿರವಾಗಿ ಕಟ್ಟಿದ ಕಟ್ಟಡಗಳ ಸರ್ವೇ ಹಾಗೂ ಅವುಗಳ ಮಾಲೀಕರಿಗೆ ನೋಟಿಸ್, ಎಲ್ಲ ಬಹುಮಹಡಿ ಕಟ್ಟಡಗಳ ಸೆಟ್ ಬ್ಯಾಕ್ ಕುರಿತ ಸರ್ವೇಗೆ ಆದೇಶಿಸಿದರು.

ಜಾಹೀರಾತು

unnamed-2

ಬಿ.ಸಿ.ರೋಡ್ ನ ಪಾರ್ಕಿಂಗ್ ವ್ಯವಸ್ಥೆ, ಮಣಿಹಳ್ಳ ರಸ್ತೆ ಅಗಲೀಕರಣ, ಪಾಣೆಮಂಗಳೂರು ಅಕ್ರಮ ಕಟ್ಟಡ,  ಬಂಟ್ವಾಳ ಬೈಪಾಸ್ ನ್ನು ಖುದ್ದು ವೀಕ್ಷಿಸಿದ ಅವರು ಅಧಿಕಾರಿಗಳಿಗೆ ನಕ್ಷೆ ಪ್ರಕಾರ ಕಾರ್ಯಾಚರಿಸಲು ಹಾಗೂ ಯಾವುದೇ ಒತ್ತಡಗಳಿಗೆ ಮಣಿಯದೆ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಲು ಸಲಹೆ ನೀಡಿದರು.

ಆದರೆ ತಪ್ಪು ವರದಿ ನೀಡಿದರೆ ಶಿಸ್ತು ಕ್ರಮ ಎದುರಿಸಬೇಕಾದೀತು ಎಂದು ಎಚ್ಚರಿಸಿದರು.

ಸಹಾಯಕ ಕಮೀಷನರ್ ಗಾರ್ಗಿ, ಪುರಸಭೆ ಮುಖ್ಯಾಧಿಕಾರಿ ಕೆ.ಸುಧಾಕರ್, ಅಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಹಿರಿಯ ಸದಸ್ಯ ಎ.ಗೋವಿಂದ ಪ್ರಭು, ಸದಸ್ಯರಾದ ಇಕ್ಬಾಲ್ ಗೂಡಿನಬಳಿ, ಮಹಮ್ಮದ್ ಶರೀಫ್ ಮೊದಲಾದವರು ಇದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ಪುರಸಭೆಗೆ ಚುರುಕು ಮುಟ್ಟಿಸಿದ ಜಿಲ್ಲಾಧಿಕಾರಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*