ವಿಟ್ಲ: ಭಾರತ್ ಸ್ಕೌಟ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆಯ ಪಟಲಾಂ ನಾಯಕರ ತರಬೇತಿ ಹಾಗೂ ಪದಕಾರ್ಜುನ ತರಬೇತಿ ಶಿಬಿರ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಚಂದಳಿಕೆ ಶಾಲೆ ಮತ್ತು ವಿದ್ಯಾವರ್ಧಕ ಸಂಘ ಚಂದಳಿಕೆ ಶಾಲೆ ನೇತೃತ್ವದಲ್ಲಿ ಚಂದಳಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅರುಣ್ ವಿಟ್ಲ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಿಠಲ ಪದವಿ ಪೂರ್ವ ಕಾಲೇಜು ನಿವೃತ್ತ ಪ್ರಾಂಶುಪಾಲ ಅನಂತಕೃಷ್ಣ ಹೆಬ್ಬಾರ್ ವಹಿಸಿದ್ದರು.
ಸುದರ್ಶನ ಪಡಿಯಾರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನಾರಾಯಣ ಗೌಡ, ವಿಟ್ಲ ಪಟ್ಟಣ ಪಂಚಾಯಿತಿ ಸ್ಥಾಯೀ ಸಮಿತಿ ಅಧ್ಯಕ್ಷ ರವಿಪ್ರಕಾಶ್ ವಿಟ್ಲ, ವಿಟ್ಲ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶಿವರಾಮ ಭಟ್, ವಿದ್ಯಾವರ್ಧಕ ಸಂಘ ಚಂದಳಿಕೆ ಶಾಲೆ ಅಧ್ಯಕ್ಷೆ ಭವಾನಿ ರೈ ಕೊಲ್ಯ, ಉಪಾಧ್ಯಕ್ಷ ದೇಜಪ್ಪ ನಿಡ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದಳಿಕೆ ಶಾಲೆ ಚೆನ್ನಪ್ಪ ಪೂಜಾರಿ, ಡಿಓಸಿ ಎಂ.ಜಿ.ಕಜೆ, ಉದ್ಯಮಿ ಸಂಜೀವ ಉಪಸ್ಥಿತರಿದ್ದರು.
ವಿಶ್ವನಾಥ ಗೌಡ ಸ್ವಾಗತಿಸಿ, ಪ್ರಸ್ತಾವನೆಗೈದರು. ಮುಖ್ಯಶಿಕ್ಷಕಿ ಪುಷ್ಪಾ ವಂದಿಸಿದರು. ಶಾಲಾ ಶಿಕ್ಷಕ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು.
ಡಿಓಸಿ ಎಂ.ಜಿ.ಕಜೆ, ಶಾರದಾ ಎಸ್.ರಾವ್, ಲೀನಾ ರೋಡ್ರಿಗಸ್ ವಿಟ್ಲ ಇವರ ಮಾರ್ಗದರ್ಶನದಲ್ಲಿ ಸ್ಕೌಟ್ಸ್, ಗೈಡ್ಸ್, ಕಬ್ಸ್, ಬುಲ್‌ಬುಲ್ ಪಟಲಾಂ ನಾಯಕರ ಕಾರ್ಯಾಗಾರವು ವಿಟ್ಲ ಸ್ಥಳೀಯ ಸಂಸ್ಥೆಯ ಶಿಕ್ಷಕ-ಶಿಕ್ಷಕಿಯರ ಮಾರ್ಗದರ್ಶನದಲ್ಲಿ ನಡೆಯಿತು. ಶಿಬಿರದಲ್ಲಿ ೨೪ ಶಾಲೆಯ ಸುಮಾರು 234 ಸ್ಕೌಟ್ಸ್, ಗೈಡ್ಸ್, ಬುಲ್ ಬುಲ್, ಕಬ್ ವಿದ್ಯಾರ್ಥಿಗಳು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದರು.
Be the first to comment on " ಪದಕಾರ್ಜುನ ತರಬೇತಿ ಶಿಬಿರ"