ವಿಟ್ಲ: ಕ್ರೀಡಾ ಸಾಧಕನಿಂದ ಶಾಲೆಗೆ ಹೆಸರು ತರುವ ಕಾರ್ಯ ಸಾಧ್ಯ ಎಂದು ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷೆ ಸರಸ್ವತಿ ಬಿ.ಹೇಳಿದರು.
ಶುಕ್ರವಾರ ಅಳಿಕೆ ಶ್ರೀ ಸತ್ಯಸಾಯಿ ಕ್ರೀಡಾಂಗಣದಲ್ಲಿ ಕರ್ನಾಟಕ ಸರ್ಕಾರ, ದ ಕ ಜಿಲ್ಲೆ ಪದವಿ ಪೂರ್ವ ಶಿಕ್ಷಣ ಇಲಾಖೆ, ಅಳಿಕೆ ಶ್ರೀ ಸತ್ಯ ಸಾಯಿ ಲೋಕ ಸೇವಾ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಪಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ 2016-17 ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷ ಯು ಗಂಗಾಧರ ಭಟ್ ಮಾತನಾಡಿದರು. ಅಳಿಕೆ ಶ್ರೀ ಸತ್ಯ ಸಾಯಿ ಲೋಕ ಸೇವಾ ವಿದ್ಯಾ ಸಂಸ್ಥೆಗಳ ಸಂಚಾಲಕ ಕೆ ಎಸ್ ಕೃಷ್ಣ ಭಟ್ ದ್ವಜಾರೋಹಣಗೈದರು. ಕ್ರೀಡಾ ಸಾಧನೆ ಮಾಡಿದ ಅಂತರಾಷ್ಟ್ರೀಯ ಕ್ರೀಡಾ ಸಾಧಕ ಪ್ರೇಮನಾಥ ಶೆಟ್ಟಿ, ಉತ್ತಮ ನಾಟಕ ನಿರ್ದೇಶಕ ಚಿನ್ನಪ್ಪ, ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಮಂಗಳೂರು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಮ್ಮಯ್ಯ ಕೆ ಆರ್, ಅಳಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಹಿರಿಯರಾದ ರಮಾನಂದ ಎಚ್, ಶಂಕರಿ ಅಮ್ಮ, ವೆಂಕಟಲಕ್ಷ್ಮೀ ಕೆವಿ ಮತ್ತಿತರರು ಉಪಸ್ಥಿತರಿದ್ದರು.
ಅಳಿಕೆ ಶ್ರೀ ಸತ್ಯ ಸಾಯಿ ಲೋಕ ಸೇವಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪ್ರಕಾಶ್ ವಿ. ದೈವಜ್ಞ ಸ್ವಾಗತಿಸಿದರು. ಅಳಿಕೆ ಶ್ರೀ ಸತ್ಯ ಸಾಯಿ ಲೋಕ ಸೇವಾ ಟ್ರಸ್ಟ್ ಕಾರ್ಯದರ್ಶಿ ಚಂದ್ರಶೇಖರ ಭಟ್ ಪ್ರತಿಜ್ಞಾವಿಧಿ ಬೋಧಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜೇಂಡ್ರ ರೈ ಸನ್ಮಾನಿತರ ಪರಿಚಯ ಮಾಡಿದರು. ಇಂಗ್ಲಿಷ್ ಉಪನ್ಯಾಸಕ ಅಶೋಕ ಭಟ್ ವಂದಿಸಿದರು. ವ್ಯವಹಾರ ಅಧ್ಯಯನ ಉಪನ್ಯಾಸಕ ಯಾದವ ಎನ್ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಕ್ರೀಡಾ ಸಾಧಕರಿಂದ ಶಾಲೆಗೆ ಹೆಸರು ಬರಲು ಸಾಧ್ಯ"