ಬಂಟ್ವಾಳ

ಪಿಂಚಣಿ ಫಲಾನುಭವಿಗಳಿಗೆ ಆಧಾರ ಸಂಖ್ಯೆ ಅಗತ್ಯ

ಬಂಟ್ವಾಳ: ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಆಧಾರ ಸಂಖ್ಯೆ ಅಗತ್ಯವಿದ್ದು ಬಾಕಿಯಿರುವ ಫಲಾನುಭವಿಗಳು  25ರ ಒಳಗಾಗಿ ತನ್ನ ಆಧಾರ್ ಸಂಖ್ಯೆಯನ್ನು ಸಂಬಂಧಪಟ್ಟ ಗ್ರಾಮ ಕರಣಿಕರಲ್ಲಿ ನೀಡುವಂತೆ ಬಂಟ್ವಾಳ ತಾಲೂಕು ತಹಶೀಲ್ದಾರರ ಪ್ರಕಟನೆ ತಿಳಿಸಿದೆ.

ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳಿಗೆ ಆಧಾರ್ ಸಂಖ್ಯೆ ಜೋಡನೆ ಹಾಗೂ ದತ್ತಾಂಶ ಶುದ್ದೀಕರಣ ಕಾರ್ಯ ಮುಂದಿನ ನವೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕಾಗಿದೆ. ಇಲ್ಲವಾದರೆ ಕೇಂದ್ರ ಸರಕಾರದಿಂದ ಬಿಡುಗಡೆಯಾಗುವ ಅನುದಾನ ಪಡೆಯಲು ತೊಂದರೆಯಾಗಲಿದೆ. ಪಿಂಚಣಿ ವಿತರಣೆಯಲ್ಲೂ ವ್ಯತಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಫಲಾನುಭವಿಗಳು ತಕ್ಷಣ ತಮ್ಮ ಆಧಾರ್ ಸಂಖ್ಯೆಯನ್ನು ಗ್ರಾಮ ಕರಣಿಕರಲ್ಲಿ ನೀಡುವಂತೆ ಅವರು ಕೋರಿದ್ದಾರೆ.

ಜಾಹೀರಾತು

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ