ವಿಟ್ಲ: ವಿಟ್ಲ ಐಟಿಐಯ ವಿದ್ಯಾರ್ಥಿಗಳು ಕಳೆದ ಹಲವಾರು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಬಾರೀ ಕಷ್ಟದಲ್ಲಿ ವ್ಯಾಸಂಗ ನಡೆಸಿದ್ದಾರೆ. ಮುಂದಿನ ನವರಾತ್ರಿ ವೇಳೆಗೆ ಈ ಕಟ್ಟಡ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೊಳ್ಳಲು ಗುತ್ತಿಗೆದಾರರು ಶ್ರಮಿಸಬೇಕು ಎಂದು ಪುತ್ತೂರು ಶಾಸಕಿ ಟಿ ಶಕುಂತಳಾ ಶೆಟ್ಟಿ ಹೇಳಿದರು.
ಶನಿವಾರ ವಿಟ್ಲ ಕಸಬಾ ಗ್ರಾಮದ ಕೆಮ್ಮಲೆಯಲ್ಲಿ ಕರ್ನಾಟಕ ಸರ್ಕಾರ, ಉದ್ಯೋಗ ಮತ್ತು ತರಬೇತಿ ಇಲಾಖೆಯ ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ನಬಾರ್ಡ್ ಆರ್ ಐ ಡಿ ಎಫ್-೧19 ನಬಾರ್ಡ್ ಯೋಜನೆಯಲ್ಲಿ ಮಂಜೂರಾದ ೨.೬೭ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೆರ, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್, ವಿಟ್ಲದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅರುಣ ವಿಟ್ಲ, ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಕಾಶ್, ವಿಟ್ಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಮಾನಾಥ ವಿಟ್ಲ, ಪಟ್ಟಣ ಪಂಚಾಯಿತಿ ವಿರೋಧ ಪಕ್ಷದ ನಾಯಕ ಅಶೋಕ್ ಕುಮಾರ್ ಶೆಟ್ಟಿ, ಸದಸ್ಯರಾದ ಶ್ರೀಕೃಷ್ಣ, ರಾಮ್‌ದಾಸ್ ಶೆಣೈ, ದೇವಕಿ, ಚಂದ್ರಕಾಂತಿ, ದಮಯಂತಿ, ಇಂದಿರಾ, ಲತಾವೇಣಿ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಚಂದ್ರ ಆಳ್ವ, ಉಪಾಧ್ಯಕ್ಷ ರಾಜೇಶ್ ಬಾಳೆಕಲ್ಲು, ಐಟಿಐ ಪ್ರಾಂಶುಪಾಲ ಬಾಲಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.
Be the first to comment on "ಮುಂದಿನ ವರ್ಷದೊಳಗೆ ಐಟಿಐಗೆ ಸ್ವಂತ ಕಟ್ಟಡ"