ಬಂಟ್ವಾಳ: ಮುಲ್ಲರಪಟ್ಣ ಫಲ್ಗುಣಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದ ಸಂದರ್ಭದಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಬೇಕೆಂದು ಆಗ್ರಹಿಸಿ ಮೃತ ಶರೀಫ್‌ನ ಸಹೋದರ ಹಸೈನಾರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆರವರಿಗೆ ಮನವಿ ಸಲ್ಲಿಸಿದರು.
ಶರೀಫ್ ಸಾವು ಪ್ರಕರಣವನ್ನು ಗಂಭೀರ ಪರಿಗಣಿಸಿ ತನಿಖೆಯನ್ನು ಚುರುಕುಗೊಳಿಸಬೇಕು. ಪ್ರತ್ಯಕ್ಷದರ್ಶಿಗಳ ಹಾಗೂ ಗಾಯಾಳು ಝೈನುದ್ದೀನ್ ಅವರ ಹೇಳಿಕೆಯನ್ನು ಪಡೆದು ತನಿಖೆ ನಡೆಸಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.
ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ಶರೀಫ್‌ರ ತಾಯಿ, ಸಹೋದರ, ಕುಟುಂಬಸ್ಥರು ಉಪಸ್ಥಿತರಿದ್ದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…