ಇರಾ: ಇರಾ ತಾಳಿತ್ತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಇಂದು ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಇರಾ ತಾಳಿತ್ತಬೆಟ್ಟು ಶಾಲಾಭಿವೃಧ್ದಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಮುರಳೀಧರ ಭಂಡಾರಿ , ಶಾಲಾ ಮುಖ್ಯ ಶಿಕ್ಷಕಿ ಸುಜಾತಾ ಟಿ.ಎಸ್. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಚಂದ್ರಾವತಿ, ಊರಿನ ಗಣ್ಯರಾದ, ವಾಮನ ಪೂಜಾರಿ, ಅದ್ರಾಮ ಟಿ. , ಹಬೀಬುರ್ರಹ್ಮಾನ್ ಪಾಲ್ಗೊಂಡಿದ್ದರು. ಅಂಗನವಾಡಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಬಹುಮಾನಗಳನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಇವರು ವಿತರಿಸಿದರು.
ಅಂಗನವಾಡಿ ಕಾರ್ಯಕರ್ತೆ ಪ್ರೇಮಲತಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸತ್ಯಲತಾ ವಂದಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…