ವಿಟ್ಲ: ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಬಹಳಷ್ಟಿದೆ. ಎಂದು ಅಳಿಕೆ ಶ್ರೀ ಸತ್ಯ ಸಾಯಿ ಲೋಕ ಸೇವಾ ವಿದ್ಯಾಕೇಂದ್ರದ ನಿವೃತ್ತ ಪ್ರಾಂಶುಪಾಲ ಕೆ. ಸಂಜೀವ ಶೆಟ್ಟಿ ಹೇಳಿದರು.
ಬುಧವಾರ ಅಳಿಕೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಅಳಿಕೆ ಗ್ರಾಮ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ವಲಯ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಮತ್ತು ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾಂತಡ್ಕ ಅಂಗನವಾಡಿ ನಿವೃತ್ತ ಸಹಾಯಕಿ ಶೀಲಾವತಿ ಅವರನ್ನು ಸನ್ಮಾನಿಸಲಾಯಿತು. ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಶ್ರೀ ಕೋಡಂದೂರು, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸದಸ್ಯ ಪದ್ಮನಾಭ ನಾಯ್ಕ ಬಿ., ಅಳಿಕೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸೆಲ್ವೀನಾ ಡಿಸೋಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ನಿರೂಪಣಾಧಿಕಾರಿ ನಟರಾಜ್, ಅಳಿಕೆ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಜಯಪ್ರಕಾಶ್, ಉದ್ಯಮಿ ಸಂಜೀವ ಪೂಜಾರಿ, ಜನಜಾಗೃತಿ ವೇದಿಕೆ ವಿಟ್ಲ ವಲಯ ಅಧ್ಯಕ್ಷ ಬಾಲಕೃಷ್ಣ ಕಾರಂತ ಎರುಂಬು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ಕೆ.ಎ. ಮತ್ತಿತರರು ಉಪಸ್ಥಿತರಿದ್ದರು.