ವಿಟ್ಲ: ಬೈಕಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕುಳ ಗ್ರಾಮದ ಕಾರ್ಯಾಡಿ ನಿವಾಸಿ ಜುಬೈದಾ(40) ಮಹಿಳೆ ಸಾವನ್ನಪ್ಪಿದ್ದಾರೆ.
12ರಂದು ಬೈಕಿನ ಹಿಂಬದಿಯಲ್ಲಿ ಕುಳಿತುಕೊಂಡು ಕಂಬಳಬೆಟ್ಟು ಕಡೆಯಿಂದ ಉರಿಮಜಲು ಕಡೆಗೆ ತೆರಳುತ್ತಿದ್ದ ವೇಳೆ ಕಂಬಳಬೆಟ್ಟು ಸಮೀಪ ರಸ್ತೆಯಲ್ಲಿದ್ದ ಹೊಂಡಕ್ಕೆ ಬೈಕಿನ ಚಕ್ರ ಸಿಕ್ಕಿಹಾಕಿಕೊಂಡಿದ್ದರಿಂದ ಬೈಕ್ ರಸ್ತೆ ಉರುಳಿ ಬಿದ್ದಿತ್ತು. ಘಟನೆಯಲ್ಲಿ ಮಹಿಳೆಯ ತಲೆಗೆ ಗಂಭೀರ ಗಾಯಗೊಂಡಿತ್ತು.
ವಿಟ್ಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…