ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಭಾರತೀಯ ಜೀವವಿಮಾ ನಿಗಮ ಇದರ ಆಶ್ರಯದಲ್ಲಿ ಆಮ್‌ಆದ್ಮಿ ಯೋಜನೆ ಮತ್ತು ಸೇವಾಂಜಲಿಯ ರೂ. 6.5 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನ.20 ರಂದು ಆದಿತ್ಯವಾರ ಬೆಳಿಗ್ಗೆ 10.30 ಗಂಟೆಗೆ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ.
ಮಾಜಿ ಲೋಕಾಯುಕ್ತ ಎನ್. ಸಂತೋಷ್ ಹೆಗ್ಡೆ, ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀ ನಾರಾಯಣ ಆಳ್ವ, ಸಂಸದ ನಳಿನ್ ಕುಮಾರ್ ಕಟೀಲು, ಎಲ್‌ಐಸಿ ಉಡುಪಿ ವಿಭಾಗೀಯ ಅಧಿಕಾರಿ ಪಿ. ವಿಶ್ವೇಶ್ವರ ರಾವ್, ಮಾರುಕಟ್ಟೆ ಪ್ರಬಂಧಕ ವಿ.ರಾಜೇಶ್ ಮುಧೋಳ್, ಮಂಗಳೂರು ಶಾಖಾಧಿಕಾರಿ ಎಸ್.ಗುರುರಾಜ ರಾವ್, ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ರವೀಂದ್ರ ಕಂಬಳಿ ಭಾಗವಹಿಸುವರು ಎಂದು ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಭಾನುವಾರ ಫರಂಗಿಪೇಟೆಗೆ ಸಂತೋಷ್ ಹೆಗ್ಡೆ"