ಬಂಟ್ವಾಳ

ಕನಕದಾಸರಿಂದ ದಾಸಸಾಹಿತ್ಯಕ್ಕೆ ಮೇಲ್ಪಂಕ್ತಿ: ಡಿವೈಎಸ್ಪಿ ರವೀಶ್

ಬಂಟ್ವಾಳ: ಕೀರ್ತನೆಗಳ ಮೂಲಕ ಸಾಹಿತ್ಯವನ್ನು ರಚಿಸಿ ಸಾಮಾನ್ಯ ಜನರಿಗೂ ತನ್ನ ಅನುಭವದ ಅನುಭಾವವನ್ನು ನೀಡಿ ದಾಸ ಸಾಹಿತ್ಯಕ್ಕೆ ಮೇಲ್ಪಂಕ್ತಿ ಹಾಕಿದವರು ಕನಕದಾಸರು ಎಂದು ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ರವೀಶ್ ಸಿ.ಆರ್. ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಬಿ.ಸಿ.ರೋಡಿನ ತಾಲೂಕು ಕಚೇರಿಯಲ್ಲಿ ನಡೆದ ಕನಕ ಜಯಂತಿ ಆಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಾಹೀರಾತು

ತಹಶೀಲ್ದಾರ್ ಪುರಂದರ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಾತಿಪದ್ದತಿಗಳ ವಿರುದ್ದ ಹೋರಾಟ ನಡೆಸಿ ತನ್ನ ಕೀರ್ತನೆಗಳ ಮೂಲಕ ಸಮಾಜದಲ್ಲಿ ಅನಿಷ್ಠಪದ್ದತಿಗಳನ್ನು ಎತ್ತಿ ತೋರಿಸಿದ ಕನಕದಾಸರು ಪ್ರಸ್ತುತರು ಎಂದು ಅಭಿಪ್ರಾಯಪಟ್ಟರು.

ಪುರಸಭೆ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್. ಶುಭ ಕೋರಿದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಸಿಪ್ರಿಯಾನ್ ಮಿರಾಂಡ  ಕ್ಷೇತ್ರ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಶ್ರೀಕಾಂತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಉಪತಹಶೀಲ್ದಾರ್  ಭಾಸ್ಕರ ರಾವ್, ಪರಮೇಶ್ವರ ನಾಯ್ಕ್, ಸರ್ವೇ ಮೇಲ್ವಿಚಾರಕ ನಿಸಾರ್ ಅಹಮದ್, ಕಂದಾಯ ನಿರೀಕ್ಷಕರಾದ ದಿವಾಕರ್ ಹಾಜರಿದ್ದರು. ಉಪತಹಶೀಲ್ದಾರ್ ಪರಮೇಶ್ವರ ಮೊಯಿಲಿ ಸ್ವಾಗತಿಸಿದರು, ಕಂದಾಯ ನಿರೀಕ್ಷಕ ರಾಮ ಕೆ. ವಂದಿಸಿದರು. ನವೀನ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts