ಬಂಟ್ವಾಳ: ಕೀರ್ತನೆಗಳ ಮೂಲಕ ಸಾಹಿತ್ಯವನ್ನು ರಚಿಸಿ ಸಾಮಾನ್ಯ ಜನರಿಗೂ ತನ್ನ ಅನುಭವದ ಅನುಭಾವವನ್ನು ನೀಡಿ ದಾಸ ಸಾಹಿತ್ಯಕ್ಕೆ ಮೇಲ್ಪಂಕ್ತಿ ಹಾಕಿದವರು ಕನಕದಾಸರು ಎಂದು ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ರವೀಶ್ ಸಿ.ಆರ್. ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಬಿ.ಸಿ.ರೋಡಿನ ತಾಲೂಕು ಕಚೇರಿಯಲ್ಲಿ ನಡೆದ ಕನಕ ಜಯಂತಿ ಆಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಹಶೀಲ್ದಾರ್ ಪುರಂದರ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಾತಿಪದ್ದತಿಗಳ ವಿರುದ್ದ ಹೋರಾಟ ನಡೆಸಿ ತನ್ನ ಕೀರ್ತನೆಗಳ ಮೂಲಕ ಸಮಾಜದಲ್ಲಿ ಅನಿಷ್ಠಪದ್ದತಿಗಳನ್ನು ಎತ್ತಿ ತೋರಿಸಿದ ಕನಕದಾಸರು ಪ್ರಸ್ತುತರು ಎಂದು ಅಭಿಪ್ರಾಯಪಟ್ಟರು.
ಪುರಸಭೆ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್. ಶುಭ ಕೋರಿದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಸಿಪ್ರಿಯಾನ್ ಮಿರಾಂಡ ಕ್ಷೇತ್ರ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಶ್ರೀಕಾಂತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಉಪತಹಶೀಲ್ದಾರ್ ಭಾಸ್ಕರ ರಾವ್, ಪರಮೇಶ್ವರ ನಾಯ್ಕ್, ಸರ್ವೇ ಮೇಲ್ವಿಚಾರಕ ನಿಸಾರ್ ಅಹಮದ್, ಕಂದಾಯ ನಿರೀಕ್ಷಕರಾದ ದಿವಾಕರ್ ಹಾಜರಿದ್ದರು. ಉಪತಹಶೀಲ್ದಾರ್ ಪರಮೇಶ್ವರ ಮೊಯಿಲಿ ಸ್ವಾಗತಿಸಿದರು, ಕಂದಾಯ ನಿರೀಕ್ಷಕ ರಾಮ ಕೆ. ವಂದಿಸಿದರು. ನವೀನ್ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಕನಕದಾಸರಿಂದ ದಾಸಸಾಹಿತ್ಯಕ್ಕೆ ಮೇಲ್ಪಂಕ್ತಿ: ಡಿವೈಎಸ್ಪಿ ರವೀಶ್"