ಬಂಟ್ವಾಳ

ಛಾಯಾಗ್ರಾಹಕರ ಸಂಘದಿಂದ ಮಕ್ಕಳ ದಿನಾಚರಣೆ

ಬಂಟ್ವಾಳ: ಸೌತ್ ಕೆನರಾ ಪೋಟೊ ಗ್ರಾಫರ್‍ಸ್ ಅಸೋಸಿಯೆಶನ್ ಬಂಟ್ವಾಳ ವಲಯ ವತಿಯಿಂದ ಕೊಯಿಲ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ ನಡೆಯಿತು.

ಶಾಲಾ ಬೆಳ್ಳಿ ಹಬ್ಬದ ಅಧ್ಯಕ್ಷ ಜಗದೀಶ ಕೊಯ್ಲ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಲಯಾಧ್ಯಕ್ಷ ಸುಕುಮಾರ್ ಬಂಟ್ವಾಳ್ ವಹಿಸಿದ್ದರು.

ಜಾಹೀರಾತು

ಮುಖ್ಯ ಅತಿಥಿಗಳಾಗಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದೇವಪ್ಪ ಕರ್ಕೇರ, ಮುಖ್ಯೋಪಾಧ್ಯಾಯ ಸುಧೀರ್ ಜಿ, ಭಜನಾ ಒಕ್ಕೂಟ ಅಧ್ಯಕ್ಷ ರವೀಂದ್ರ ಪೂಜಾರಿ ಕೈತ್ತೋಡಿ, ಯಕ್ಷಲೋಕ ಬಿ.ಸಿ.ರೋಡ್ ನಿರ್ದೇಶಕ ಗೋಪಾಲ ಅಂಚನ್, ಮಜಿ ಶಾಲಾ ಮುಖ್ಯೋಪಾಧ್ಯಾಯ ನಾರಾಯಣ ಪೂಜಾರಿ, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಸಂತೋಷ್ ರಾಯಿಬೆಟ್ಟು, ಫೊಟೊಗ್ರಾಫರ್ ಸಂಘದ ಉಪಾಧ್ಯಕ್ಷ ರಾಜೇಂದ್ರ ಕೆ, ಕೋಶಾಧಿಕರಿ ರವಿ ಕಲ್ಪನೆ, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಸಂತೋಷ ಕೊಯಿಲ ಹಾಗೂ ಮಹೇಶ್ ಶೆಟ್ಟಿ, ಸಿದ್ಧಕಟ್ಟೆ ಪ್ರತಿನಿಧಿ ಸುಧಾಕರ್. ಹಾಗೂ ವಲಯ ಸದಸ್ಯರು ವೇದಿಕೆಯಲ್ಲಿ ಉಪಸ್ಧಿತರಿದ್ದರು. ಪ್ರಧಾನ ಕಾರ್ಯದರ್ಶಿ ಹರೀಶ್ ಕುಂದರ್ ಸ್ವಾಗತಿಸಿ ಸಂಘಟನ ಕಾರ್ಯದರ್ಶಿ ಚಿನ್ನು ಕಲ್ಲಡ್ಕ ರವರು ಧನ್ಯವಾದ ವಿತ್ತರು.

ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಅಸೋಸಿಯೆಶನ್ ಅಯೋಜಿಸಿದ್ದ ಚಿತ್ರಕಲಾ ಸ್ವರ್ಧೆ, ಮುದ್ದುಕಂದ ಪೋಟೊ ಹಾಗೂ ಶಾಲಾ ಮಕ್ಕಳ  ಸಾಂಸ್ಕ್ರತಿಕ ವಿವಿಧ ಸ್ವರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮವನ್ನು ಜಿಲ್ಲಾ ಕೋಶಾಧಿಕಾರಿ ದಯನಂದ್ ಬಂಟ್ವಾಳ ಕಾರ್ಯಕ್ರಮವನ್ನು ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

4 hours ago