ವಿಟ್ಲ: ಹೊರ ದೃಷ್ಠಿಯಿಂದ ಜಗತ್ತನ್ನು ನೋಡುವ ಹಾಗೆ, ಭಗವಂತನನ್ನು ನೋಡಲು ಒಳ ದೃಷ್ಠಿ ಅಗತ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಶುಕ್ರವಾರ ಒಡಿಯೂರು ಶ್ರೀಗುರುದೇವ ಜ್ಞಾನ ಮಂದಿರದಲ್ಲಿ ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ವತಿಯಿಂದ ಒಡಿಯೂರು ಶ್ರೀ ಗುರುದೇವ ಗ್ರಾಮ ವಿಕಾಸ ಯೋಜನೆಯ ಕನ್ಯಾನ – ಕರೋಪಾಡಿ ಗ್ರಾಮ ಸಮಿತಿ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಸಹಕಾರದಲ್ಲಿ ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯ ತಜ್ಞ ವೈದ್ಯರಿಂದ ನಡೆದ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಮಂಗಳೂರು ವೆನ್‌ಲಾಕ್ ಆಸ್ಪತ್ರೆಯ ಡಿ.ಎಂ.ಒ ಡಾ. ಎಚ್. ಆರ್. ರಾಜೇಶ್ವರೀದೇವಿ ಮಾತನಾಡಿ ಧಾರ್ಮಿಕ ಕ್ಷೇತ್ರದಲ್ಲಿ ಸಿಗುವ ಪ್ರೇರಣೆಯಿಂದ ಕೆಲಸ ಕಾರ್ಯದಲ್ಲಿ ಉತ್ಸಾಹ ಸಿಗುತ್ತದೆ ಎಂದು ತಿಳಿಸಿದರು.
ಕೂರ್ನಾಡು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಶಾಂತ್ ಕಾಜವ ಮಿತ್ತಕೋಡಿ ಮಾತನಾಡಿದರು.
ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷ ಎ. ಅಶೋಕ್ ಕುಮಾರ್, ಒಡಿಯೂರು ಗ್ರಾಮ ವಿಕಾಸ ಯೋಜನೆಯ ಪ್ರಧಾನ ಸಂಚಾಲಕ ಟಿ ತಾರಾನಾಥ ಕೊಟ್ಟಾರಿ, ಮಂಗಳೂರು ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷ ಜಯಂತ ಜೆ ಕೋಟ್ಯಾನ್, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕ ಪುರುಷೋತ್ತಮ, ಕನ್ಯಾನ ಗ್ರಾಮ ಸಮಿತಿ ಶ್ರೀ ಗುರುದೇವ ಗ್ರಾಮವಿಕಾಸ ಯೋಜನೆಯ ಅಧ್ಯಕ್ಷ ಕೆ.ಪಿ ರಘುರಾಮ ಶೆಟ್ಟಿ, ಒಡಿಯೂರು ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ ಶೆಟ್ಟಿ, ಶ್ರೀ ಗುರುದೇವ ಗ್ರಾಮ ವಿಕಾಸ ಯೋಜನೆಯ ಕರೋಪಾಡಿ ಗ್ರಾಮ ಸಮಿತಿ ಅಧ್ಯಕ್ಷ ರಘುನಾಥ ಶೆಟ್ಟಿ ಪಟ್ಲ ಉಪಸ್ಥಿತರಿದ್ದರು.
ಅನಿತಾ ರಾವ್ ಪ್ರಾರ್ಥಿಸಿದರು. ಒಡಿಯೂರು ಸೇವ ಬಳಗದ ಕಾರ್ಯದರ್ಶಿ ಸಂತೋಷ್ ಕುಮಾರ್ ಭಂಡಾರಿ ಒಡಿಯೂರು ಸ್ವಾಗತಿಸಿದರು. ಅಜಿತ್‌ನಾಥ ಶೆಟ್ಟಿ ಒಡಿಯೂರು ವಂದಿಸಿದರು. ಒಡಿಯೂರು ಗ್ರಾಮ ವಿಕಾಸ ಯೋಜನೆಯ ಮೇಲ್ವಿಚಾರಕ ಸದಾಶಿವ ಅಳಿಕೆ ನಿರೂಪಿಸಿದರು.
ಶಿಬಿರದ ಪ್ರಯೋಜನ ಪಡೆದರು:
ಉಚಿತ ಆರೋಗ್ಯ ತಪಾಸಣೆಯ ಪ್ರಯೋಜನವನ್ನು 116 ಮಂದಿ ಪಡೆದರೆ, 120 ಮಂದಿ ನೇತ್ರ ತಪಾಸಣೆಯಲ್ಲಿ ಭಾಗವಹಿಸಿದರು. 90 ಮಂದಿಗೆ ಉಚಿತ ಕನ್ನಡ ವಿತರಣೆ ನಡೆಯಿತು. ವೆನ್‌ಲಾಕ್ ಆಸ್ಪತ್ರೆಯಲ್ಲಿ 20 ಮಂದಿಗೆ ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯಿತು.
Be the first to comment on "ಭಗವಂತನ ನೋಡಲು ಒಳಗಣ್ಣು ಬೇಕು: ಒಡಿಯೂರು ಸ್ವಾಮೀಜಿ"