ಮಂಚಿ: ಮಂಚಿ ಸೈಟ್ ಅಂಗನವಾಡಿ ಕೇಂದ್ರದಲ್ಲಿ ಕಾಡಂಗಡಿ ಮತ್ತು ಮಂಚಿಸೈಟ್ ಅಂಗನವಾಡಿ ಕೇಂದ್ರಗಳ ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್.ಮಹಮ್ಮದ್, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸಾಲಿ, ಗ್ರಾಮ ಪಂಚಾಯತ್ ಸದಸ್ಯರಾದ ಬದ್ರುದ್ದೀನ್ ಉಪಸ್ಥಿತರಿದ್ದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಸುಧಾ ಜೋಷಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮೇಲ್ವಿಚಾರಕಿ ಗುಣವತಿ ಸ್ವಾಗತಿಸಿದರು.
ಮಕ್ಕಳಿಗೆ ವಿವಿಧ ಸ್ಪರ್ಧೆಗಳಿದ್ದು ಬಹುಮಾನ ನೀಡಲಾಯಿತು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಪೋಷಕರು, ಸ್ತ್ರೀಶಕ್ತಿ ಸದಸ್ಯರು, ಆಶಾ ಕಾರ್ಯಕರ್ತೆ ಉಪಸ್ಥಿತರಿದ್ದರು. ಕಾರ್ಯಕರ್ತೆ ಶರ್ಮಿಳಾ ಕಾರ್ಯಕ್ರಮ ನಿರೂಪಿಸಿ,ಕಾರ್ಯಕರ್ತೆ ಪ್ರೇಮ ವಂದಿಸಿದರು.