ವಿಟ್ಲ: ಸಂಸ್ಕಾರಯುತ ಶಿಕ್ಷಣ ಪಡೆದಾಗ ವಿದ್ಯಾರ್ಥಿ ಸಮಾಜದಲ್ಲಿ ಮುಂದೆ ಬರಲು ಸಾಧ್ಯ ಎಂದು ಆಲ್‌ಕಾರ್ಗೋ ಸಂಸ್ಥೆಯ ಮಂಗಳೂರು ವಿಭಾಗದ ಪ್ರಬಂಧಕ ನಕ್ರೆ ಸುರೇಂದ್ರ ಶೆಟ್ಟಿ ಹೇಳಿದರು.
ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಮುಂಬೈ ಆಲ್ ಕಾರ್ಗೋ ಲಾಜಿಸ್ಟಿಕ್ಸ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಬಂಟ್ವಾಳ ತಾಲ್ಲೂಕಿಗೆ ಸಂಬಂಧಪಟ್ಟ ಬಡ, ಪ್ರತಿಭಾನ್ವಿತ ಹಾಗೂ ಶಿಕ್ಷಣದಲ್ಲಿ ಸಾಧನೆಗೈದ 166 ವಿದ್ಯಾರ್ಥಿಗಳಿಗೆ 501100 ರೂ. ಸ್ಕಾಲರ್‌ಶಿಫ್‌ಗಳನ್ನು ವಿತರಿಸಿ ಮಾತನಾಡಿದರು.
ಜೆಸಿಐ ತರಬೇತುದಾರ ಕೃಷ್ಣ ಮೋಹನ್ ಪಿ.ಎಸ್ ಮಾತನಾಡಿ ವಿದ್ಯಾರ್ಥಿ ವೇತನ ಪಡೆದಾಗ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಾಗುತ್ತದೆ ಎಂದರು.
ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ವಿಠಲ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ, ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶಂಕರ್ ಪಾಟಾಲಿ ಉಪಸ್ಥಿತರಿದ್ದರು.
ವಿಠಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಸ್ವಾಗತಿಸಿದರು. ಶಂಕರ ನಾರಾಯಣ ಪ್ರಸಾದ್ ಪರಿಚಯ ಮಾಡಿದರು. ಸುಪ್ರಜಿತ್ ಐಟಿಐನ ಪ್ರಾಂಶುಪಾಲ ರಘುರಾಮ ಶಾಸ್ತ್ರಿ ವಂದಿಸಿದರು. ಶಿಕ್ಷಕ ಸಿ.ಎಚ್ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು.