ಬಂಟ್ವಾಳ

ಧನ್ಯವಾದ ಬ್ಯಾನರಿನಡಿಯೇ ಭರ್ಜರಿ ಮಾರಾಟ!

ಬಂಟ್ವಾಳ: ಬಿ.ಸಿ.ರೋಡಿನ ಮೇಲ್ಸೇತುವೆಯಡಿ ಹೊರಜಿಲ್ಲೆಯ ತರಕಾರಿ ವ್ಯಾಪಾರಸ್ಥರು ಕಳೆದ ಕೆಲ ಸಮಯಗಳಿಂದ ವ್ಯಾಪಾರ ನಡೆಸುತ್ತಿದ್ದರು. ಇದರಿಂದಾಗಿ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಡಕಾಗುತ್ತಿದ್ದ ಹಿನ್ನೆಲೆಯಲ್ಲಿ ಬಂಟ್ವಾಳ ಪುರಸಭೆ ಪೊಲೀಸರ ಸಹಕಾರದೊಂದಿಗೆ ತೆರವು ಕಾರ್ಯಾಚರಣೆ ನಡೆಸಿತ್ತು. ಇದಕ್ಕಾಗಿ ಬಿ.ಸಿ.ರೋಡಿನ ನಾಗರಿಕರು ಕಾರ್ಯಾಚರಣೆ ನಡೆಸಿದ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿ ಬ್ಯಾನರ್ ಅಳವಡಿಸಿದ್ದರು.

ಹಾಗೆಯೇ ಮೇಲ್ಸೇತುವೆಯಡಿಯಲ್ಲಿ ಸಂಜೆ ಹೊತ್ತ ತಳ್ಳುಗಾಡಿಯನ್ನಿಟ್ಟು ವ್ಯಾಪಾರ ನಡೆಸುತ್ತಿದ್ದ ಅನಧಿಕೃತ ಗೂಡಂಗಡಿಗಳನ್ನೂ ತೆರವುಗೊಳಿಸಲಾಗಿತ್ತು. ಆದರೆ ಈ ಗೂಡಂಗಡಿದಾರರಿಗೆ ಆನಂತರ ಮತ್ತೆ ಇಲ್ಲಿ ತಲೆಯೆತ್ತಲು ಪೊಲೀಸರಾಗಲಿ, ಪುರಸಭೆಯಾಗಲೀ, ಬಿಟ್ಟಿರಲಿಲ್ಲ. ಈ ವಿಚಾರ ಕಳೆದ ಸಾಮಾನ್ಯ ಸಭೆಯಲ್ಲೂ ಚರ್ಚೆ ನಡೆದಿತ್ತು. ಪುರಸಭಾ ವ್ಯಾಪ್ತಿಯಲ್ಲಿರುವ ಎಲ್ಲ ಅನಧಿಕೃತ ಗೂಡಂಗಡಿ ತೆರವುಗೊಳಿಸಿ ಅವರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವ  ಚರ್ಚೆ ನಡೆದಿತ್ತಾದರೂ ಈ ಬಗ್ಗೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ಪ್ರತಿ ಭಾನುವಾರ ಧನ್ಯವಾದದ ಬ್ಯಾನರ್ ಸುತ್ತಲೇ ತರಕಾರಿ ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿದೆ.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ