ಬಂಟ್ವಾಳ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಂಟ್ವಾಳ ತಾಲೂಕು ಪ್ರಖಂಡದ ವತಿಯಿಂದ ಸೋಮವಾರ ಸಂಜೆ ಬಿ.ಸಿ.ರೋಡಿನ ರಾಜರಸ್ತೆಯಲ್ಲಿ ಆಕರ್ಷಕ ಪಥಸಂಚಲನ ನಡೆಯಿತು.
ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದಿಂದ ಹೊರಟ ಪಥಸಂಚಲನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದವರೆಗೆ ಸಾಗಿ ಬಂದು ವಾಪಸ್ ತೆರಳಿ ಅಜ್ಜಿಬೆಟ್ಟು ಶಾಲಾ ಮೈದಾನದಲ್ಲಿ ಸಂಪನ್ನಗೊಂಡಿತು.
ಈ ಸಂದರ್ಭ ಬಿಜೆಪಿ ಮುಖಂಡರಾದ ರಾಜೇಶ್ ನಾಯ್ಕ್ ಉಳೇಪಾಡಿಗುತ್ತು, ಜಿ.ಆನಂದ, ದೇವದಾಸ ಶೆಟ್ಟಿ, ಕೊಡ್ಮಣ್ ಕಾಂತಪ್ಪ ಶೆಟ್ಟಿ, ರಾಮದಾಸ ಬಂಟ್ವಾಳ, ಪ್ರಮೋದ್ ಕುಮಾರ್ ರೈ, ಸಂಘದ ಮುಖಂಡರಾದ ಜಿ.ಕೆ. ಭಟ್, ವೆಂಕಟರಮಣ ಹೊಳ್ಳ ಸೇರಿದಂತೆ ನೂರಾರು ಮಂದಿ ಗಣವೇಷಧಾರಿಗಳಾಗಿ ಪಥಸಂಚಲನದಲ್ಲಿ ಪಾಲ್ಗೊಂಡರು. ಆಕರ್ಷಕ ಘೋಷ್ ವಾದನ ಪಥಸಂಚಲನಕ್ಕೆ ನೆರವು ನೀಡಿತು. ಮುಖಂಡ ನ.ಸೀತಾರಾಮ್ ಬೌದ್ಧಿಕ್ ನೀಡಿದರು.
ಬಂಟ್ವಾಳ ನಗರ ಪೊಲೀಸರು ಹಾಗೂ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬಂದೋಬಸ್ತ್ ಏರ್ಪಡಿಸಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಸಿ.ರೋಡಿನಲ್ಲಿ ಆರೆಸ್ಸೆಸ್ ಪಥಸಂಚಲನ"