ಬಂಟ್ವಾಳ: ಪರಸ್ಪರ ಸೌಹಾರ್ದತೆ ಬದುಕಿನ ಜೊತೆಗೆ ಶ್ರಮ ಜೀವನದ ಬಗ್ಗೆ ನೈಜ ಪಾಠ ಕಲಿಸುವ ಎನ್‌ಎಸ್‌ಎಸ್ ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವೂ ವೃದ್ಧಿಯಾಗುತ್ತದೆ ಎಂದು ವಕೀಲ ಸುರೇಶ ಶೆಟ್ಟಿ ಹೇಳಿದ್ದಾರೆ.
ತಾಲೂಕಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಮಹಾವಿದ್ಯಾಲಯ (ಎಸ್‌ವಿಎಸ್) ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ಭಾನುವಾರ ಸಂಜೆ ಆರಂಭಗೊಂಡ ವಾರ್ಷಿಕ ವಿಶೇಷ ಶಿಬಿರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಪಾಂಡುರಂಗ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಎನ್‌ಎಸ್‌ಎಸ್ ಶಿಬಿರ ವಿದ್ಯಾರ್ಥಿಗಳಲ್ಲಿ ಪಠ್ಯದ ಜೊತೆಗೆ ನೈತಿಕ ಸ್ಥೈರ್ಯ ತುಂಬುವ ಮೂಲಕ ಅವರಲ್ಲಿನ ಪ್ರತಿಭೆ ಅನಾವರಣಗೊಳಿಸುತ್ತದೆ ಎಂದರು.
ರಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಬಿ.ಸಿ.ರೋಡ್ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ, ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ.ಕೆ.ತುಕಾರಾಮ ಪೂಜಾರಿ ಮಾತನಾಡಿ, ವಿದ್ಯಾರ್ಥಿಗಳು ಎನ್‌ಎಸ್‌ಎಸ್ ಶಿಬಿರದಲ್ಲಿ ಶ್ರಮದಾನ ಜೊತೆಗೆ ಸುಸಂಸ್ಕೃತ ಮತ್ತು ಶಿಸ್ತುಬದ್ಧ ಸಮಾಜ ನಿರ್ಮಿಸಲು ಶ್ರಮಿಸಬೇಕು ಎಂದರು.
ಸ್ಥಳೀಯ ತಾಲ್ಲೂಕು ಪಂಚಾಯಿತಿ ಸದಸ್ಯೆ ಮಂಜುಳಾ ಸದಾನಂದ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ, ಉದ್ಯಮಿ ಸುಧೀರ್ ಕುಮಾರ್ ಶೆಟ್ಟಿ, ಮುಖ್ಯಶಿಕ್ಷಕ ಜಯರಾಮ ಪಡ್ರೆ ಮತ್ತಿತರರು ಶುಭ ಹಾರೈಸಿದರು. ಸಹ ಶಿಬಿರಾಧಿಕಾರಿ ಪ್ರದೀಪ್ ಪೂಜಾರಿ, ಉಪನ್ಯಾಸಕರಾದ ಅಶ್ವಿತಾ, ಸ್ವಾತಿ, ರೂಪಾ ಹರೀಶ್, ಪ್ರತಿಭಾ, ತಂಡದ ನಾಯಕ ಸುದರ್ಶನ್ ಸುವರ್ಣ, ವಿದ್ಯಾಲಕ್ಷ್ಮಿ, ದೀಪಕ್ ಶೆಟ್ಟಿಗಾರ್, ರಶ್ಮಿ ಮತ್ತಿತರರು ಇದ್ದರು.
ಶಿಬಿರಾಧಿಕಾರಿ ಪ್ರೊ.ನಾರಾಯಣ ಭಂಡಾರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಶಿಬಿರಾಧಿಕಾರಿ ಕಿಟ್ಟು ರಾಮಕುಂಜ ವಂದಿಸಿದರು. ಶಿಬಿರಾರ್ಥಿ ಮೇಘರಾಜ್ ಕಾರ್ಯಕ್ರಮ ನಿರೂಪಿಸಿದರು.