ವಾಮದಪದವು

ವಾಮದಪದವು ಕಾಲೇಜಿನಲ್ಲಿ ದಾನ್ ಉತ್ಸವ

ಬಂಟ್ವಾಳ: ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು, ರೇಂಜರ್ಸ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ದಾನ್ ಉತ್ಸವ (ಪರೋಪಕಾರಾರ್ಥಂ ಇದಂ ಶರೀರಂ) ಕಾರ್ಯಕ್ರಮ ಅಜ್ಜಿಬೆಟ್ಟು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು, ರೇಂಜರ್ಸ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ದಾನ್ ಉತ್ಸವ ನಡೆಯಿತು.

ರೋವರ್ಸ್, ರೇಂಜರ್ಸ್, ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಿಂದ ಶಾಲಾ ಆವರಣ ಸ್ವಚ್ಛತೆ, ಶೌಚಾಲಯಗಳಿಗೆ ಬಣ್ಣ ನೀಡುವುದರ ಮೂಲಕ ಶ್ರಮದಾನ ಮಾಡಿದ ಬಳಿಕ ದಾನ್ ಉತ್ಸವ ದ ಪ್ರಧಾನ ಕಾರ್ಯಕ್ರಮವನ್ನು  ನೆರವೇರಿಸಲಾಯಿತು.

ಭಾರತೀಯ ಸಂಸ್ಕೃತಿಯ ಮಾನವೀಯ ಮೌಲ್ಯಗಳಯ ಮತ್ತು ಸಮಾಜಕ್ಕೆ ನಾನೇನಾದರೂ ಕೋಡಬೇಕು, ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂಬ ಭಾವನೆ ವಿದ್ಯಾರ್ಥಿಗಳಲ್ಲಿ ಮೂಡಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಕಾಲೇಜಿನ ರೋವರ್ ಸ್ಕೌಟ್ ಲೀಟರ್ ಪ್ರೊ. ರವಿ ಎಂ.ಎನ್. ತಿಳಿಸಿದರು.

ಜಾಹೀರಾತು

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ನವೀನ್ ಚಂದ್ರ ಶೆಟ್ಟಿ, ಪ್ರಾಂಶುಪಾಲ ಪ್ರೋ. ಸಯ್ಯದ್ ಗೌಸ್  ಮಾತನಾಡಿದರು.

ಅಧ್ಯಕ್ಷತೆಯನ್ನು ಸ. ಹಿ. ಪ್ರಾ. ಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀ ಕಾಂತ್ ವಹಿಸಿದ್ದರು. ರೇಂಜರ್ಸ್ ಲೀಡರ್ ರಾಧಾ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ  ಯೋಜನೆ ಯೋಜನಾಧಿಕಾರಿ ಪ್ರೊ. ಸುರೇಶ್ ವಿಟ್ಲ ಸ್ವಾಗತಿಸಿದರು. ಅಂತಿಮ ಬಿಬಿಎಂ ವಿದ್ಯಾರ್ಥಿ ತುಕರಾಮ್ ವಂದಿಸಿದರು. ಅಂತಿಮ ಬಿಕಾಂ ವಿದ್ಯಾರ್ಥಿನಿ ರೇಂಜರ್ ಕುಮಾರಿ ದೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ನಂತರ ದಾನ್ ಉತ್ಸವದ ಪ್ರಮುಖ ಭಾಗವಾಗಿ, ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ನೀಡಿದ ಪೆನ್ನು,  ಪುಸ್ತಕ, ಪೆನ್ಸಿಲ್, ಸ್ಕೇಲ್, ರಬ್ಬರ, ನೋಟ್‌ಬುಕ್‌ಗಳನ್ನು 1 ರಿಂದ 5 ನೇ ತರಗತಿಯ ಶಾಲಾ ಮಕ್ಕಳಿಗೆ ವಿತರಿಸಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts