ಬಂಟ್ವಾಳ: ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು, ರೇಂಜರ್ಸ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ದಾನ್ ಉತ್ಸವ (ಪರೋಪಕಾರಾರ್ಥಂ ಇದಂ ಶರೀರಂ) ಕಾರ್ಯಕ್ರಮ ಅಜ್ಜಿಬೆಟ್ಟು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ರೋವರ್ಸ್, ರೇಂಜರ್ಸ್, ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಿಂದ ಶಾಲಾ ಆವರಣ ಸ್ವಚ್ಛತೆ, ಶೌಚಾಲಯಗಳಿಗೆ ಬಣ್ಣ ನೀಡುವುದರ ಮೂಲಕ ಶ್ರಮದಾನ ಮಾಡಿದ ಬಳಿಕ ದಾನ್ ಉತ್ಸವ ದ ಪ್ರಧಾನ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಭಾರತೀಯ ಸಂಸ್ಕೃತಿಯ ಮಾನವೀಯ ಮೌಲ್ಯಗಳಯ ಮತ್ತು ಸಮಾಜಕ್ಕೆ ನಾನೇನಾದರೂ ಕೋಡಬೇಕು, ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂಬ ಭಾವನೆ ವಿದ್ಯಾರ್ಥಿಗಳಲ್ಲಿ ಮೂಡಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಕಾಲೇಜಿನ ರೋವರ್ ಸ್ಕೌಟ್ ಲೀಟರ್ ಪ್ರೊ. ರವಿ ಎಂ.ಎನ್. ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ನವೀನ್ ಚಂದ್ರ ಶೆಟ್ಟಿ, ಪ್ರಾಂಶುಪಾಲ ಪ್ರೋ. ಸಯ್ಯದ್ ಗೌಸ್ ಮಾತನಾಡಿದರು.
ಅಧ್ಯಕ್ಷತೆಯನ್ನು ಸ. ಹಿ. ಪ್ರಾ. ಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀ ಕಾಂತ್ ವಹಿಸಿದ್ದರು. ರೇಂಜರ್ಸ್ ಲೀಡರ್ ರಾಧಾ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿ ಪ್ರೊ. ಸುರೇಶ್ ವಿಟ್ಲ ಸ್ವಾಗತಿಸಿದರು. ಅಂತಿಮ ಬಿಬಿಎಂ ವಿದ್ಯಾರ್ಥಿ ತುಕರಾಮ್ ವಂದಿಸಿದರು. ಅಂತಿಮ ಬಿಕಾಂ ವಿದ್ಯಾರ್ಥಿನಿ ರೇಂಜರ್ ಕುಮಾರಿ ದೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ನಂತರ ದಾನ್ ಉತ್ಸವದ ಪ್ರಮುಖ ಭಾಗವಾಗಿ, ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ನೀಡಿದ ಪೆನ್ನು, ಪುಸ್ತಕ, ಪೆನ್ಸಿಲ್, ಸ್ಕೇಲ್, ರಬ್ಬರ, ನೋಟ್‌ಬುಕ್‌ಗಳನ್ನು 1 ರಿಂದ 5 ನೇ ತರಗತಿಯ ಶಾಲಾ ಮಕ್ಕಳಿಗೆ ವಿತರಿಸಲಾಯಿತು.
Be the first to comment on "ವಾಮದಪದವು ಕಾಲೇಜಿನಲ್ಲಿ ದಾನ್ ಉತ್ಸವ"