ಲಯನ್ಸ್ ಕ್ಲಬ್ ಬಂಟ್ವಾಳದಲ್ಲಿ ವಿದ್ಯಾರ್ಥಿ ವೇತನ ವಿತರಣೆ

ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳದಲ್ಲಿ ಆಲ್‌ಕಾರ್ಗೋ ಲಾಜಿಸ್ಟಿಕ್ ಲಿಮಿಟೆಡ್ ಸಂಸ್ಥೆ ಆಶ್ರಯದಲ್ಲಿ  2016-17ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯ 93 ಶಿಕ್ಷಣ ಸಂಸ್ಥೆಗಳ ಅರ್ಹ 1606 ವಿದ್ಯಾರ್ಥಿಗಳಿಗೆ ಒಟ್ಟು 50,40,000 ರೂ.  ಮೊತ್ತದ ವಿದ್ಯಾರ್ಥಿವೇತನವನ್ನು ವಿತರಣೆ ನಡೆಯಿತು.

23-cargo

ಆಲ್‌ಕಾರ್ಗೋ ಸಂಸ್ಥೆಯ ಮಂಗಳೂರು ವಿಭಾಗದ ಪ್ರಬಂಧಕ ನಕ್ರೆ ಸುರೇಂದ್ರ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳು ತಾವು ಪಡೆದ ವಿದ್ಯಾರ್ಥಿವೇತನವನ್ನು ಬದ್ಧತೆಯಿಂದ ಉಪಯೋಗಿಸಿಕೊಂಡು, ಸೂಕ್ತ ಮಾಹಿತಿಯನ್ನು ಸಕಾಲದಲ್ಲಿ ಸಂಸ್ಥೆಗೆ ಒದಗಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ಜಾಹೀರಾತು

ಸರಕು ಸಾಗಾಣಿಕೆಯಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಿರುವ ಬಂಟ್ವಾಳ ಮೂಲದ ಡಾ.ಶಶಿಕಿರಣ್ ಶೆಟ್ಟಿಯವರು ಕಠಿಣ ಪರಿಶ್ರಮದ ಮೂಲಕ ಕಟ್ಟಿ ಬೆಳೆಸಿರುವ ಮುಂಬಯಿ ಆಲ್‌ ಕಾರ್ಗೋ ಲಾಜಿಸ್ಟಿಕ್ ಲಿಮಿಟೆಡ್ ಸಂಸ್ಥೆಯು ಉದ್ಯಮ ಕ್ಷೇತ್ರದಲ್ಲಿ ಇಂದು ಅಂತರಾಷ್ಟ್ರೀಯ ಖ್ಯಾತಿಯನ್ನು ಗಳಿಸಿದ್ದು,  ಸಾಮಾಜಿಕ, ಆರೋಗ್ಯ  ಹಾಗೂ ಶೈಕ್ಷಣಿಕ ಸೇವಾ ಕಾರ್ಯಗಳಲ್ಲೂ ತನ್ನನ್ನು ತೊಡಗಿಸಿಕೊಳ್ಳುವುದರ ಮೂಲಕ ಅಗ್ರಮಾನ್ಯ ಸಂಸ್ಥೆಯಾಗಿ ರೂಪುಗೊಳ್ಳುತ್ತಿದೆ ಎಂದರು.

ಮುಖ್ಯಅತಿಥಿ ಕಾರ್ಕಳ  ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ. ಪದ್ಮನಾಭ ಗೌಡ ಮಾತನಾಡಿ ವಿದ್ಯಾರ್ಥಿಗಳು ತಮ್ಮನ್ನು ಪೋಷಾಕು, ಸಿರಿವಂತಿಕೆಯ ಪ್ರದರ್ಶನದಿಂದ ಗುರುತಿಸಿಕೊಳ್ಳಲು ಪ್ರಯತ್ನಿಸದೆ, ತಮ್ಮ  ಅಂತಃ ಶಕ್ತಿಯನ್ನು ಬೆಳೆಸಿಕೊಂಡು ಪ್ರತಿಭಾನ್ವಿತರಾಗಬೇಕು. ಮುಂದೆ ಬದುಕಿನಲ್ಲಿ ಯಶಸ್ಸನ್ನು ಪಡೆದಾಗ ಶಶಿಕಿರಣ್ ಶೆಟ್ಟಿಯವರಂತೆ ತನ್ನ ಆದಾಯದ ಸ್ವಲ್ಪ ಭಾಗವನ್ನು ಸಾಮಾಜಿಕ  ಕಾರ್ಯಗಳಲ್ಲಿ ವಿನಿಯೋಗಿಸಬೆಕು ಎಂದು ಹೇಳಿದರು.

ಬಂಟ್ವಾಳ ಲಯನ್ಸ್ ಸೇವಾ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ. ವಸಂತ ವಿದ್ಯಾರ್ಥಿವೇತನ ವಿತರಿಸಿದರು.

ಬಿ.ಮೂಡ ಸರಕಾರಿ ಪ.ಪೂ. ಕಾಲೇಜಿನ ಉಪನ್ಯಾಸಕ ಯೂಸುಫ್ ವಿಟ್ಲ ಸ್ವಾಗತಿಸಿ, ವಂದಿಸಿದರು. ಉಪನ್ಯಾಸಕ ದಾಮೋದರ ಇ. ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಲಯನ್ಸ್ ಕ್ಲಬ್ ಬಂಟ್ವಾಳದಲ್ಲಿ ವಿದ್ಯಾರ್ಥಿ ವೇತನ ವಿತರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*