ಬಂಟ್ವಾಳ: ಮಾಣಿ ಕರ್ನಾಟಕ ಪದವಿಪೂರ್ವ ಕಾಲೇಜಿನಲ್ಲಿ 25ರಂದು ಮಧ್ಯಾಹ್ನ 1.30ಕ್ಕೆ ರಾಜ್ಯ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಡಾ.ಸಿದ್ಧರಾಜು ಅವರೊಂದಿಗೆ ’ಪತ್ರಿಕೋದ್ಯಮ ಸಂವಾದ ಮತ್ತು ಮಾಹಿತಿ’ ಕಾರ್ಯಕ್ರಮ ಆಯೋಜಿಸಲಾಗಿದೆ.
ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರುಗೇಶ ಬಿ.ಶಿವಪೂಜಿ ಅಧ್ಯಕ್ಷತೆ ವಹಿಸಲಿದ್ದು, ಮಾಣಿ ವಿದ್ಯಾಭಿವರ್ಧಕ ಸಂಘದ ಕಾರ್ಯದರ್ಶಿ ಕಿರಣ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸುವರು.
ಸಂಘದ ರಾಜ್ಯ ಉಪಾಧ್ಯಕ್ಷ ಗೌರೀಶ ಶಾಸ್ತ್ರಿ, ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಡಾ.ಶಿವಶರಣ್ ಶೆಟ್ಟಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ವೆಂಕಟೇಶ ಬೆಂಡೆ, ವಾರ್ತಾಧಿಕಾರಿ ಖಾದರ್ ಷಾ, ಕಾಲೇಜಿನ ಪ್ರಾಂಶುಪಾಲ ರವೀಂದ್ರ ಶೆಟ್ಟಿ ಎಂ., ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಮಾಧವ ಎಸ್.ಮಾವೆ, ತಾಲ್ಲೂಕು ಪಂಚಾಯಿತಿ ಸದಸ್ಯೆ ಮಂಜುಳಾ ಕುಶಲ ಎಂ.ಪೆರಾಜೆ, ಮಾಣಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ ಎಸ್.ಶೆಟ್ಟಿ, ಅನಂತಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ, ನೆಟ್ಲಮುಡ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಜಯ, ಪೆರಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಸಂಘದ ಅಧ್ಯಕ್ಷ ಮೋಹನ್ ಕೆ.ಶ್ರೀಯಾನ್ ರಾಯಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.