ಬಂಟ್ವಾಳ: ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆಯ ಶತಮಾನೋತ್ಸವ ಪ್ರಯುಕ್ತ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ 26ರಂದು ಮಧ್ಯಾಹ್ನ 2.30ಕ್ಕೆ ಯಕ್ಷಗಾನ ತಾಳಮದ್ದಳೆ ಶ್ರೀಕೃಷ್ಣ ರಾಯಭಾರ ಪ್ರಸಂಗ ಪ್ರದರ್ಶನ ನಡೆಯಲಿದೆ.
ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡ 86 ಕ್ಲಬ್ ಗಳಿರುವ ಲಯನ್ಸ್ ಜಿಲ್ಲೆಯ ಯಕ್ಷಗಾನ ಅಕಾಡಮಿ ಜಿಲ್ಲಾ ಅಧ್ಯಕ್ಷ ಸಂಜೀವ ಶೆಟ್ಟಿ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು.
ಈ ವಿಷಯವನ್ನು ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಕಾರ್ಯಕ್ರಮ ಸಂಯೋಜಕ ಸಂಜೀವ ಶೆಟ್ಟಿ, ಅರುಣ್ ಶೆಟ್ಟಿ, ಸಂಜೀವ ಶೆಟ್ಟಿ, ಕೆ.ದೇವದಾಸ ಭಂಡಾರಿ, ಕುಡ್ಪಿ ಅರವಿಂದ ಶೆಣೈ, ದೇವಿಪ್ರಸಾದ ರಾವ್, ರೊನಾಲ್ಡ್ ಗೋಮ್ಸ್, ಎ.ಜಿ.ಶರ್ಮ, ಲಕ್ಷ್ಮಣ ಕುಲಾಲ್, ದೇವಿಕಾ ದಾಮೋದರ್ ಸಭೆಯಲ್ಲಿ ಭಾಗವಹಿಸುವರು ಎಂದರು.
ಭಾಗವತರಾಗಿ ಗಿರೀಶ್ ರೈ ಕಕ್ಕೆಪದವು, ಚೆಂಡೆ, ಮದ್ದಳೆಯಲ್ಲಿ ಗಣೇಶ್ ಭಟ್ ನೆಕರೆಕೋಡಿ, ಅಕ್ಷಯ ರಾವ್ ವಿಟ್ಲ, ಅರ್ಥಧಾರಿಗಳಾಗಿ ಶಂಭು ಶರ್ಮ ವಿಟ್ಲ, ಸುಣ್ಣಂಬಳ ವಿಶ್ವೇಶ್ವರ ಭಟ್, ಪೆರ್ಮುದೆ ಜಯಪ್ರಕಾಶ್ ಶೆಟ್ಟಿ, ಸಂಜೀವ ಶೆಟ್ಟಿ ಭಾಗವಹಿಸುವರು ಎಂದರು.