ಬಂಟ್ವಾಳ: ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆಯ ಶತಮಾನೋತ್ಸವ ಪ್ರಯುಕ್ತ ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡ 86 ಕ್ಲಬ್ ಗಳಿರುವ ಲಯನ್ಸ್ ಜಿಲ್ಲೆ 317ಡಿ ವಾರ್ಷಿಕ ಕ್ರೀಡೋತ್ಸವ ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ನವೆಂಬರ್ ೨೭ರಂದು ನಡೆಯಲಿದೆ.
ಲಯನ್ಸ್ ಕ್ಲಬ್ ಬಂಟ್ವಾಳ ಅಧ್ಯಕ್ಷ ಲಕ್ಷ್ಮಣ್ ಕುಲಾಲ್ ಅಗ್ರಬೈಲ್ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಇದರ ಕುರಿತು ಮಾಹಿತಿ ನೀಡಿದರು.
ಕ್ರೀಡಾಕೂಟಕ್ಕೆ ಸುಮಾರು 500ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ಮಾಹಿತಿ ನೀಡಿದರು.
ಬೆಳಗ್ಗೆ 9ಗಂಟೆಗೆ ಲಯನ್ಸ್ ಗವರ್ನರ್ ಎಂ.ಅರುಣ್ ಶೆಟ್ಟಿ ಮತ್ತು ಶಾರದಾ ಪ್ರೌಢಶಾಲಾ ಸಂಚಾಲಕ ಜನಾರ್ದನ ಭಟ್ ಕಾರ್ಯಕ್ರಮ ಉದ್ಘಾಟಿಸುವರು. ಕ್ರೀಡಾಕೂಟ ಸಂಯೋಜಕ ಶ್ರೀನಿವಾಸ ಪೂಜಾರಿ ಮೇಲ್ಕಾರ್ ಅಧ್ಯಕ್ಷತೆ ವಹಿಸಲಿದ್ದು, ಉಪಗವರ್ನರ್ ಗಳಾದ ಎಚ್.ಆರ್.ಹರೀಶ್, ಕೆ.ದೇವದಾಸ ಭಂಡಾರಿ, ಲಯನ್ಸ್ ಕ್ಲಬ್ ಅಧ್ಯಕ್ಷ ಲಕ್ಷ್ಮಣ ಕುಲಾಲ್, ಲಯನೆಸ್ ಅಧ್ಯಕ್ಷೆ ದೇವಿಕಾ ದಾಮೋದರ ಮತ್ತಿತರರು ಭಾಗವಹಿಸಲಿದ್ದಾರೆ.
ಈ ಸಂದರ್ಭ ರಾಷ್ಟ್ರೀಯ ಕಬಡ್ಡಿ ಆಟಗಾರ ಪ್ರಶಾಂತ್ ರೈ ಹಾಗೂ ಅಂತಾರಾಷ್ಟ್ರೀಯ ಪವರ್ ಲಿಫ್ಟರ್ ಸುಪ್ರೀತ್ ಪೂಜಾರಿ ಅವರನ್ನು ಸನ್ಮಾನಿಸಲಾಗುವುದು ಎಂದರು.
ಈ ಸಂದರ್ಭ ಲಯನ್ಸ್ ಪದಾಧಿಕಾರಿಗಳಾದ ಉಮೇಶ್ ಆಚಾರ್, ಶ್ರೀನಿವಾಸ ಪೂಜಾರಿ, ಸಂಜೀವ ಶೆಟ್ಟಿ, ಜಗದೀಶ ಯಡಪಡಿತ್ತಾಯ, ವಸಂತ ಕುಮಾರ್ ಶೆಟ್ಟಿ, ಪುಷ್ಪರಾಜ ಶೆಟ್ಟಿ, ಸತ್ಯನಾರಾಯಣ ರಾವ್ ಉಪಸ್ಥಿತರಿದ್ದರು.
Be the first to comment on "27ರಂದು ಪಾಣೆಮಂಗಳೂರಿನಲ್ಲಿ ಲಯನ್ಸ್ ಕ್ರೀಡೋತ್ಸವ"