ಕಲ್ಲಡ್ಕ

ಕ್ರೀಡೆಯ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ

ಬಂಟ್ವಾಳ; ಕ್ರೀಡೆಯ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರಿಂದ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ ಎಂದು ರಾಷ್ಟ್ರೀಯ ವೆಯ್ಟ್ ಲಿಪ್ಟಿಂಗ್ ತರಬೇತುದಾರರಾದ  ಪ್ರಮೋದ್ ಶೆಟ್ಟಿ ಹೇಳಿದ್ದಾರೆ .

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಶಾಲಾ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಾಹೀರಾತು

ಕ್ರೀಡೆಯಿಂದ ಆರೋಗ್ಯ ವರ್ಧಿಸಲು ಸಾಧ್ಯ , ಎಲ್ಲದಕ್ಕೂ ಔಷಧಿಯೇ ಮೂಲವಲ್ಲ ಎಂದ ಅವರು, ಸ್ಪರ್ಧಾಳುಗಳಿಗೆ ಕ್ರೀಡಾ ಸ್ಪೂರ್ತಿ ಅಗತ್ಯ ಎಂದರು.

ಶಾಲಾ ಸಂಚಾಲಕರಾದ  ಹಾಗೂ  ಕಾರ್ಯಕ್ರಮದ ಅಧ್ಯಕ್ಷ  ಪ್ರಹ್ಲಾದ .ಜೆ. ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆದಷ್ಟು ತಮ್ಮನ್ನು ತೊಡಗಿಸಿಕೊಳ್ಳುವುದು ಅಗತ್ಯ ಎಂದರು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಕೆ ಬಾಲಕೃಷ್ಣ ಆಳ್ವರವರು ಜೀವನದಲ್ಲಿ ಕ್ರೀಡೆಯ ಪಾತ್ರ ಬಹು ಮಹತ್ವದ್ದು ಎಂದರು.

ಶಾಲಾ ಆಡಳಿತ ಮಂಡಳಿ  ಕಾರ್ಯದರ್ಶಿ ನಾರಾಯಣ ಶೆಟ್ಟಿ , ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ನಿವೃತ್ತ ಶಿಕ್ಷಕಿ  ಲಕ್ಷ್ಮಿ , ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಶಂಕರ್ .ವಿ , ಶಾಲಾ ಆಡಳಿತಾಧಿಕಾರಿ ಸಿ. ಶ್ರೀಧರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಗ್ರೇಸ್ .ಪಿ. ಸಲ್ಡಾನಾ ಉಪಸ್ಥಿತರಿದ್ದರು .ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನ, ಕ್ರೀಡಾ ಜ್ಯೋತಿಯ ಆಗಮನ , ವಿದ್ಯಾರ್ಥಿಗಳ ಪ್ರತಿಜ್ಞಾ ಸ್ವೀಕಾರ ವಿಧಿಯು ಆಕರ್ಷಕವಾಗಿತ್ತು.

ಜಾಹೀರಾತು

ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ .ವಿ. ಶೆಟ್ಟಿ ಸ್ವಾಗತಿಸಿ , ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ್ ಪೂಜಾರಿ ವಂದಿಸಿದರು . ಶಿಕ್ಷಕಿಯರಾದ ಸುಧಾ ಎನ್.ರಾವ್ ಮತ್ತು ಜಯಶ್ರೀ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ