ಬಿ.ಸಿ.ರೋಡ್ ಅಶಿಸ್ತಿಗೆ ಡಿಸಿ ಚಾಟಿ

ಬಂಟ್ವಾಳ: ಬಿ.ಸಿ.ರೋಡಿನ ಫ್ಲೈಓವರ ಕಡೆ ಡ್ರೈನೇಜ್ ಮಾಡಿದರೆ ಯಾರಿಗೆ ಅನುಕೂಲ?

ಹೀಗೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಪ್ರಶ್ನಿಸಿದಾಗ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಉತ್ತರಿಸಲು ತಡವರಿಸಿದರು.

3

ಜಾಹೀರಾತು

ಬಂಟ್ವಾಳದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆಯಲ್ಲ ಮಾತನಾಡಿದ ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್,  ಬಿ.ಸಿ.ರೋಡ್ ಪೇಟೆಯ ಸಮಗ್ರ ಅಭಿವೃದ್ಧಿಗೆ ಸರಿಯಾದ ಯೋಜನೆ ರೂಪಿಸಬೇಕು ಎಂದು ಹೇಳಿದರು.

ಡಿಸಿಪ್ಲೀನ್ ಇಲ್ಲದಂತೆ ಬಿ.ಸಿ.ರೋಡ್ ಬೆಳೆಯುತ್ತಿದೆ, ಇದನ್ನು ಸರಿದಾರಿಗೆ ತರಲು ಏನೇನು ಕ್ರಮ ಕೈಗೊಳ್ಳಬೇಕು ಎಂದು ಪುರಸಭಾ ಸದಸ್ಯರನ್ನು ಪ್ರಶ್ನಿಸಿದರು.

ಅಧ್ಯಕ್ಷ ರಾಮಕೃಷ್ಣ ಆಳ್ವ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸದಸ್ಯರಾದ ಗೋವಿಂದ ಪ್ರಭು, ಸದಾಶಿವ ಬಂಗೇರ, ಮೋನಿಶ್ ಆಲಿ, ದೇವದಾಸ ಶೆಟ್ಟಿ, ವಾಸು ಪೂಜಾರಿ ಮೊದಲಾದವರು ತಮ್ಮ ಅಭಿಪ್ರಾಯ ತಿಳಿಸಿದರು.

ಜಾಹೀರಾತು

ಈ ಸಂದರ್ಭ ತಮ್ಮ ಯೋಜನೆಯನ್ನು ವಿವರಿಸಿದ ಜಿಲ್ಲಾಧಿಕಾರಿ, ಕೂಡಲೇ ಈ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು.

ಬಿ.ಸಿ.ರೋಡ್ ಅಭಿವೃದ್ಧಿಗೆ ಡಿಸಿ ಕಂಡುಕೊಂಡ ಕ್ರಮಗಳು ಇವು.

  • ತಾತ್ಕಾಲಿಕ ವ್ಯವಸ್ಥೆಯಲ್ಲಿ ರಸ್ತೆಯಲ್ಲೇ ವ್ಯಾಪಾರ ಮಾಡುವವರ ತೆರವು, ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ
  • ಬಿ.ಸಿ.ರೋಡಿನಲ್ಲಿರುವ ಎಲ್ಲ ಅಂಗಡಿಗಳ ಎದುರು ಎರಡು ಬಕೆಟ್ ಗಳನ್ನು ಇಡುವಂತೆ ಸೂಚಿಸಬೇಕು. ಅದರಲ್ಲಿ ತ್ಯಾಜ್ಯವನ್ನು ಅವರು ಹಾಕಲೇಬೇಕು. ಇದನ್ನು ಪಾಲಿಸದೇ ಇದ್ದಲ್ಲಿ, ಅಂಗಡಿಗಳ ಲೈಸೆನ್ಸ್ ರದ್ದುಗೊಳಿಸುವಂಥ ಕಠಿಣ ಕ್ರಮ ಕೈಗೊಳ್ಳಬೇಕು.
  • ಬಿ.ಸಿ.ರೋಡಿನ ಕೈಕುಂಜ ರಸ್ತೆಯಲ್ಲಿ ಮಾರ್ಕ್ ಮಾಡಿದ ಸ್ಥಳವನ್ನು ಗುರುತಿಸಿ, ಪಾರ್ಕಿಂಗ್ ಗೆ ಸೂಕ್ತ ಜಾಗ ಕಲ್ಪಿಸಬೇಕು. ಮಲ್ಟಿಲೆವೆಲ್ ಪಾರ್ಕಿಂಗ್ ಗೆ ಅನುಕೂಲವಾಗುವಂತೆ ವ್ಯವಸ್ಥೆ ರೂಪಿಸಬೇಕು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿ.ಸಿ.ರೋಡ್ ಅಶಿಸ್ತಿಗೆ ಡಿಸಿ ಚಾಟಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*