ಬಂಟ್ವಾಳ: ಎಲ್ಲ ಅಂದುಕೊಂಡಂತೆ ನಡೆದರೆ ಇನ್ನೊಂದು ವಾರದಲ್ಲಿ ಬಂಟ್ವಾಳ ಪೇಟೆ ರಸ್ತೆ ಅಗಲಗೊಳಿಸುವ ಪ್ರಕ್ರಿಯೆಗೆ ಚಾಲನೆ ದೊರಕಲಿದೆ.
ಶುಕ್ರವಾರ ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಬಂಟ್ವಾಳದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಂದರ್ಭ ಬಂಟ್ವಾಳ ಪೇಟೆ ಅಗಲಗೊಳಿಸುವ ಪ್ರಕ್ರಿಯೆ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದರು.
ಈ ಸಂದರ್ಭ ಮಾತನಾಡಿದ ಅಧಿಕಾರಿ ಪ್ಲಾಟಿಂಗ್ ಕುರಿತ ಮಾಹಿತಿ ನೀಡಿದರು. ಪೇಟೆ ರಸ್ತೆ ಅಗಲಗೊಳಿಸುವ ಹಂತದಲ್ಲಿ ಯಾವುದೇ ಅತಿಕ್ರಮಣಗಳು ಇದ್ದಲ್ಲಿ ಅವುಗಳನ್ನು ತೆರವುಗೊಳಿಸಬೇಕು, ಅತಿಕ್ರಮಣಕ್ಕೆ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದಿಲ್ಲ ಎಂದರು. ಬಿಲ್ಡಿಂಗ್ ಸೆಟ್ ಬ್ಯಾಕ್, ಅತಿಕ್ರಮಣ, ರೋಡ್ ಮಾರ್ಜಿನ್ ನಿಂದ ಸೆಟ್ ಬ್ಯಾಕ್ ಇದ್ದುದನ್ನು ತೆಗೆಯಬೇಕು. ಯಾವುದೇ ಅಡೆತಡೆಗಳಿದ್ದರೂ ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಿ. ಒಂದು ವಾರದೊಳಗೆ ಕೆಲಸ ಆಗಬೇಕು ಎಂದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…