ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ, ತಾ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ಬಂಟ್ವಾಳ , ಸೌತ್ ಕೆನರಾ ಫೋಟೋಗ್ರಾಫರ್‍ಸ್ ಅಸೋಶಿಯೇಶನ್ ಬಂಟ್ವಾಳ ವಲಯ, ಬಂಟ್ವಾಳ ಪತ್ರಕರ್ತರ ಸಂಘ, ಮತ್ತು ಕಾರ್ಯನಿರತ ಪತ್ರಕರ್ತರ ಸಂಘ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಕಾನೂನು ಸಾಕ್ಷರತಾ ರಥ ಸಂಚಾರಿ ನ್ಯಾಯಾಲಯದ ಅಭಿಯಾನ ಮತ್ತು ಲೋಕ ಅದಾಲತ್ ಕಾರ್ಯಕ್ರಮಕ್ಕೆ ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ ಯು. ಚಾಲನೆ ನೀಡಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಆರ್. ಮಹೇಶ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಪ್ರತಿಭಾ ಡಿ.ಆರ್, ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ, ಸಹಾಯಕ ಸರಕಾರಿ ಅಭಿಯೋಜಕರಾದ ಎಂ.ಎಸ್.ಆಲಿ, ಸಹಾಯಕ ಸರಕಾರಿ ವಕೀಲರಾದ ಸತೀಶ್ ಕುಮಾರ್ ಶಿವಗಿರಿ, ಉಪಾಧ್ಯಕ್ಷ ಸುರೇಶ್ ಕುಮಾರ್ ನಾವೂರು, ಪ್ರಧಾನ ಕಾರ್ಯದರ್ಶಿ ರಾಜಾರಾಮ ನಾಯಕ್, ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ತಹಶೀಲ್ದಾರ್ ಪುರಂದರ ಹೆಗ್ಡೆ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ., ಪ್ರಭಾರ ಶಿಶುಅಭಿವೃದ್ಧಿ ಅಧಿಕಾರಿ ಮಲ್ಲಿಕಾ, ಲಯನ್ಸ್ ಅಧ್ಯಕ್ಷ ಲಕ್ಷ್ಮಣ ಕುಲಾಲ್, ಎಸ್.ಕೆ.ಪಿ.ಎ ಅಧ್ಯಕ್ಷ ಸುಕುಮಾರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ, ವಕೀಲರುಗಳಾದ ಅಶ್ವನಿ ಕುಮಾರ್ ರೈ, ಪ್ರಸಾದ್ ಕುಮಾರ್, ಆಶಾ ಪ್ರಸಾದ್ , ಸತೀಶ್ ಬಿ., ವಿನೋದ, ಕೇಶವಿ ಗಿರೀಶ್ , ರವೀಂದ್ರ ಕುಕ್ಕಾಜೆ, ಯಶೋಧ ಮತ್ತಿತರರು ಉಪಸ್ಥಿತರಿದ್ದರು.