ಬಂಟ್ವಾಳ: ಕಲ್ಲಡ್ಕದ ಕುದ್ರೆಬೆಟ್ಟು ನಿವಾಸಿಯೊಬ್ಬರು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಸುಲೈಮಾನ್ ಸಾಹೇಬ್(65) ಸಾವನ್ನಪ್ಪಿದವರು. ಇವರು ಕಾರ್ಯನಿಮಿತ ಇಂದು ತನ್ನ ಸ್ವಿಫ್ಟ್ ಕಾರಿನಲ್ಲಿ ಮಂಗಳೂರಿಗೆ ತೆರಳಿದ್ದರು. ಕುಂಟಿಕಾನದಲ್ಲಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಅವರಿಗೆ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ. ಈ ವೇಳೆ ಅವರ ಕಾರು ಮುಂದಿನಿಂದ ಸಂಚರಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದು ನಿಂತಿದೆ. ಕೂಡಲೇ ಸಾರ್ವಜನಿಕರು ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.
ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅವರು ಅಗಲಿದ್ದಾರೆ.