ಬಂಟ್ವಾಳ: ಕೊಯಿಲ ಸರಕಾರಿ ಪ್ರೌಢ ಶಾಲೆ ನ. 26ಕ್ಕೆ ರಜತ ಮಹೋತ್ಸವಕ್ಕೆ ಸಜ್ಜಾಗಿದ್ದು ದಿನಪೂರ್ತಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬೆಳಿಗ್ಗೆ 9ಗಂಟೆಗೆ ಶ್ರೀ ನೆಲ್ಲಿರಾಯ ದೈವದ ವಾರ್ಷಿಕ ಪರ್ವ, 10 ಗಂಟೆಗೆ ನಿವೃತ್ತ ಮುಖ್ಯಶಿಕ್ಷಕ ದಾಮೋದರ ರಾವ್ ಅವರಿಂದ ಧ್ವಜಾರೋಹಣ, 11 ಗಂಟೆಗೆ ಶಾಲಾ ಮೇಲುಸ್ತುವಾರಿ ಸಮಿತಿ ಕಾರ್ಯಾಧ್ಯಕ್ಷ ದೇವಪ್ಪ ಕರ್ಕೆರ ಅಧ್ಯಕ್ಷತೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯುವುದು.
ಅಪರಾಹ್ನ 2 ರಿಂದ ಶಾಲಾ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮ, ಸಂಜೆ 4.30 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಧ ರೈ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ತನ್ವೀರ್ ಶೇಠ್ ಉದ್ಘಾಟಿಸುವರು.
ಸ್ಮರಣ ಸಂಚಿಕೆಯನ್ನು ಮೂಡಬಿದ್ರೆ ಆಳ್ವಾಸ್ ಪ್ರತಿಷ್ಠಾನದ ಡಾ. ಎಂ.ಮೋಹನ ಆಳ್ವ ಬಿಡುಗಡೆ ಮಾಡುವರು. ಸೋಲಾರ್ ವ್ಯವಸ್ಥೆಯನ್ನು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಯು.ಟಿ.ಖಾದರ್, ಕೊಠಡಿಗಳ ಶಿಲಾನ್ಯಾಸವನ್ನು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್, ರಂಗಮಂದಿರ ಶಿಲಾನ್ಯಾಸವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ನೆರವೇರಿಸುವರು.