ಬಂಟ್ವಾಳ

ಹಸುವಿನಿಂದ ದೇಶದ ಕೃಷಿ ಸಂಸ್ಕೃತಿ ವೃದ್ಧಿ

 ಬಂಟ್ವಾಳ: ಹಸು ದೇಶದ ಕೃಷಿ ಸಂಸ್ಕೃತಿಯನ್ನು ಉಳಿಸುತ್ತದೆ ಮತ್ತು ಜನರ ಆರೋಗ್ಯ ವೃದ್ದಿಸುತ್ತದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಹೇಳಿದರು.

ಕಲ್ಲಡ್ಕ ಹಾಲುಉತ್ಪಾದಕರ ಸಹಕಾರ ಸಂಘ ನಿ. ನೂತನ ಸಾಂದ್ರ ಶೀತಲೀಕರಣ ಘಟಕ (ಬಿ.ಎಂ.ಸಿ.) ಕ್ಷೀರವಾರಿಧಿ ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು

ಜನರ ಬದುಕಿಗೆ ಬೇಕಾದ ಕಾರ್‍ಯವನ್ನು ಕಲ್ಲಡ್ಕ  ಹಾಲು ಉತ್ಪಾದಕರ ಸಹಕಾರ ಸಂಘ ಮಾಡಿದೆ. ಗೋವಿನ ಬಗ್ಗೆ ಎಲ್ಲಾ ಜನರಿಗೆ ಪ್ರೀತಿ ಬರಬೇಕು. ಗೋವಿನ ರಕ್ಷಣೆ ಆದರೆ ಮಾತ್ರ ಹಾಲು ಉತ್ಪಾದಕರ ಸಹಕಾರ ಸಂಘ ಬೆಳೆಯುತ್ತದೆ ಎಂದರು.

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಅಧ್ಯಕ್ಷ ಕೆ. ರವಿರಾಜ ಹೆಗ್ಡೆ ಮಾತನಾಡಿ ಹಾಲು ಉತ್ಪಾದನೆಯ ಮೂಲಕ ಈ ಮಣ್ಣಿನ ಶ್ರೇಷ್ಟತೆಯನ್ನು ಉಳಿಸುವ ಕೆಲಸ ಹೆಚ್ಚಾಗುತ್ತಿದೆ. ಗುಣಮಟ್ಟದ ಹಾಲಿನ ಉತ್ಪಾದನೆಯ ಮೂಲಕ ಹಳ್ಳಿಗಳು ಆರ್ಥಿಕವಾಗಿ ಎತ್ತರಕ್ಕೆ ಬೆಳೆಯಲು ಮಹತ್ತರ ಪಾತ್ರವಹಿಸುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ  ಕಲ್ಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ ಮಾತನಾಡಿ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಲ್ಲಡ್ಕದಲ್ಲಿ ಶೀತಲೀಕರಣ ವ್ಯವಸ್ಥೆ ಸುಸಜ್ಜಿತವಾಗಿ ಮಾಡಲಾಗಿದೆ ಎಂದು ಹೇಳಿದರು.  ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ನಿರ್ದೇಶಕರುಗಳಾದ  ಕೆ.ಪಿ. ಸುಚರಿತ ಶೆಟ್ಟಿ, ವೀಣಾ ಆರ್.ರೈ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ವ್ಯವಸ್ಥಾಪಕ ನಿರ್ದೇಶಕ ಡಾ. ಬಿ.ವಿ. ಸತ್ಯನಾರಾಯಣ, ಗೋಳ್ತಮಜಲು ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮೀ ಕಲ್ಲಡ್ಕ  ಹಾಲು ಉತ್ಪಾದಕರ ಸಹಕಾರ ಸಂಘ ನಿ. ಉಪಾಧ್ಯಕ್ಷ ರತ್ನಾಕರ ಪ್ರಭು, ಕಾರ್‍ಯದರ್ಶಿ ರಾಜೇಶ್, ವ್ಯವಸ್ಥಾಪಕ ಡಾ. ವಿತ್ಯಾನಂದ ಭಕ್ತ, ಉಪವ್ಯವಸ್ಥಾಪಕ ಡಾ. ಮಧುಸೂಧನ ಕಾಮತ್, ನಿರ್ದೇಶಕರುಗಳಾದ ರತ್ನಾಕರ ಭಂಡಾರಿ ಸಂಕಪ್ಪ ಕೊಟ್ಟಾರಿ, ಲಿಯೋ ಡಿ’ಕುನಾ, ಹರೀಶ ನಾಯ್ಕ್, ಧನವತಿ, ಮಿಥುನ್  ಉಪಸ್ಥಿತರಿದ್ದರು.

ಕಲ್ಲಡ್ಕ  ಹಾಲು ಉತ್ಪಾದಕರ ಸಹಕಾರ ಸಂಘ ನಿ. ಇದರ  ಅಧ್ಯಕ್ಷ ಪದ್ಮನಾಭ ಕೊಟ್ಟಾರಿ ಸ್ವಾಗತಿಸಿ ಪ್ರಸ್ತಾವನೆ ನೀಡಿದರು.  ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಿಸ್ತರಣಾಧಿಕಾರಿ ಜಗದೀಶ ಎ ವಂದಿಸಿದರು.  ಕಾರ್‍ಯದರ್ಶಿ ರಾಜೇಶ್ ಕಾರ್‍ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts