ಬಂಟ್ವಾಳ: ರಾಷ್ಟ್ರಭಾಷೆಯಾದ ಹಿಂದಿಯನ್ನು ಪ್ರೀತಿಸಿ ಅದರ ಬಗ್ಗೆ ಅಭಿಮಾನವನ್ನು ಬೆಳೆಸಬೇಕು, ಎಂದು ಪುತ್ತೂರು ಪಿಲೋಮಿನಾ ಪದವಿಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕಿ ಡಾ. ಡಿಂಪಲ್ ಜೆನಿಫರ್ ಫೆರ್ನಾಂಡೀಸ್ ಹೇಳಿದರು.
ಎಸ್.ವಿ.ಎಸ್. ಪದವಿಪೂರ್ವ ಕಾಲೇಜಿನಲ್ಲಿ ಹಿಂದಿ ಸಂಘದ ವತಿಯಿಂದ ನಡೆದ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಬೆಳೆಸಬೇಕು ಎಂದು ಹೇಳಿದರು. ಅಧ್ಯಕ್ಷತೆಯನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಾಲಕೃಷ್ಣ ಗೌಡ ವಹಿಸಿದ್ದರು.
ಜಾಹೀರಾತು
ಕಾಲೇಜಿನ ಹಿಂದಿ ಸಂಘದ ಅಧ್ಯಕ್ಷೆ, ಹಿಂದಿ ಉಪನ್ಯಾಸಕಿ ದಿವ್ಯಲಕ್ಷ್ಮಿ ಸಂಪತ್ ರೈ ಅತಿಥಿಯನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಭಾಗ್ಯಲಕ್ಷ್ಮಿ ಸ್ವಾಗತಿಸಿದರು. ಕು. ಸಫ್ನಾಝ್ ಧನ್ಯವಾದ ಸಮರ್ಪಣೆ ಮಾಡಿದರು. ಕು,ಶೀತಲ್ ಪಿ.ಜೆ ಕಾರ್‍ಯಕ್ರಮ ನಿರ್ವಹಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಹಿಂದಿ ಪ್ರೀತಿಸಿ, ಅಭಿಮಾನ ಬೆಳೆಸಿ"