ಬಂಟ್ವಾಳ: ರಾಷ್ಟ್ರೀಯ ಮಾಧ್ಯಮ ನೀತಿಯನ್ವಯ ಸರಕಾರಿ ಪ್ರೌಢಶಾಲೆಗಳಿಗೆ ಅನುಮತಿ ನೀಡಲು ಸಂಪುಟದಿಂದ ಅನುಮೋದನೆ ದೊರಕಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಬಿ.ರಮಾನಾಥ ರೈ ಅವರು ಹೇಳಿದರು.
ಶನಿವಾರ ಬಂಟ್ವಾಳ ತಾಲೂಕಿನ ಸರಪಾಡಿ ಸರಕಾರಿ ಪ್ರೌಢಶಾಲೆಯ ನೂತನ ರಂಗಮಂದಿರ ಮತ್ತು ಕ್ರೀಡಾಂಗಣ ಉದ್ಘಾಟಿಸಿ ಮಾತನಾಡಿದರು.
ಕೊಳ್ನಾಡು ಸುರಿಬಲಿನಲ್ಲಿ ಪ್ರೌಢಶಾಲೆಗೆ ಅನುಮತಿ ದೊರಕಿದ್ದು ಪಾಂಡವರಕಲ್ಲುವಿನಲ್ಲಿ ಅವಕಾಶ ಕೋರಲಾಗಿದೆ ಎಂದರು.
ಸಂಸದ ನಳಿನ್ ಕುಮಾರ್ ಕಟೀಲ್ ಅವರು ದಶಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಮುದಾಯ ಸಂಘಟಿತರಾದರೆ ಸರಕಾರಿ ಶಾಲೆಗಳನ್ನು ಉಳಿಸಲು ಸಾಧ್ಯ. ಇಲ್ಲಿ ಶಿಕ್ಷಣದ ಕೊರತೆಯಿಲ್ಲ ,ಆದರೆ ತಪ್ಪು ಕಲ್ಪನೆಯಿಂದಾಗಿ ಖಾಸಗಿ ಶಾಲೆ ವ್ಯಾಮೋಹ ತೊಲಗಬೇಕು ಎಂದು ಹೇಳಿದರು.
ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಸದಸ್ಯರಾದ ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ, ಶಾಲಾ ಸ್ಥಾಪಕಾಧ್ಯಕ್ಷ ಸರಪಾಡಿ ಎನ್.ಸುಬ್ಬಣ್ಣ ಶೆಟ್ಟಿ, ತಾ.ಪಂ.ಸದಸ್ಯರಾದ ಸ್ವಪ್ನ ವಿಶ್ವನಾಥ ಪೂಜಾರಿ, ಬೇಬಿ ಕಷ್ಣಪ್ಪ,ವಿಜಯಾ ಬ್ಯಾಂಕ್ ಅಧಿಕಾರಿ ಬೇಬಿ ಕುಂದರ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಬಂಟ್ವಾಳ ತಾ.ಪಂ.ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಸರಪಾಡಿ ಗ್ರಾ.ಪಂ.ಅಧ್ಯಕ್ಷೆ ಲೀಲಾವತಿ, ಮಣಿನಾಲ್ಕೂರು ಗ್ರಾ.ಪಂ.ಅಧ್ಯಕ್ಷೆ ಗೀತಾ ಶ್ರೀಧರ್ ಪೂಜಾರಿ, ಸರಪಾಡಿ ಗ್ರಾ.ಪಂ.ಉಪಾಧ್ಯಕ್ಷ ದಯಾನಂದ ಶೆಟ್ಟಿ ಮುನ್ನಲಾಯಿಪದವು, ಮಣಿನಾಲ್ಕೂರು ಗ್ರಾ.ಪಂ.ಉಪಾಧ್ಯಕ್ಷ ದಿನೇಶ್ ಮಿಯಾರುಪಲ್ಕೆ, ಗ್ರಾ.ಪಂ.ಸದಸ್ಯರಾದ ನಾಣ್ಯಪ್ಪ ಪೂಜಾರಿ, ಧನಂಜಯ ಶೆಟ್ಟಿ,ಪ್ರೇಮಾ, ಆದಂ ಕುಂಞ, ಪದ್ಮಾವತಿ,ಸುಜಾತ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಪಿಡಿಒ ಪ್ರಶಾಂತ್, ಅಭಿಯಂತರ ಕೃಷ್ಣ ಅವರು ಉಪಸ್ಥಿತರಿದ್ದರು. ಪತ್ರಕರ್ತ ಗೋಪಾಲ ಅಂಚನ್ ವಿಶೇಷ ಉಪನ್ಯಾಸ ನೀಡಿದರು.
ಎಸ್.ಪಿ.ಸರಪಾಡಿ ವಿರಚಿತ ಆರೇ ಬರೆಯಿನಾ ತುಳು ನಾಟಕ ಕೃತಿಯನ್ನು ಸಂಸದರು ಬಿಡುಗಡೆಗೊಳಿಸಿದರು. ಈ ಹಿಂದೆ ಸೇವೆ ಸಲ್ಲಿಸಿದ ಶಿಕ್ಷಕರನ್ನು ಮತ್ತು ಎಸ್ಸೆಸೆಲ್ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಸಚಿವ ಬಿ.ರಮಾನಾಥ ರೈ, ಜಿ.ಪಂ.ಸದಸ್ಯ ಪದ್ಮಶೇಖರ ಜೈನ್ ಅವರನ್ನು ಸಮ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ತುಳು ಪ್ರಮಾಣಪತ್ರ ಮತ್ತು ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಶಿಕ್ಷಕ ಉದಯ ಕುಮಾರ್ ಬಿ. ಅವರು ಸ್ವಾಗತಿಸಿದರು. ಶಿಕ್ಷಕಿ ವನಿತ ಅವರು ವರದಿ ವಾಚಿಸಿದರು.
ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪದ್ಮಪ್ಪ ಪೂಜಾರಿ ಪ್ರಸ್ತಾವಿಸಿದರು. ಶಿಕ್ಷಕ ಶೇಖರಪ್ಪ ವಂದಿಸಿದರು. ಉಪನ್ಯಾಸಕ ಹರಿಪ್ರಸಾದ್ ಮತ್ತು ರಾಧಕೃಷ್ಣ ಕೊಟ್ಟುಂಜ ಕಾರ್ಯಕ್ರಮ ನಿರೂಪಿಸಿದರು.
ಬೆಳಗ್ಗೆ ಶಾಲಾಬಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪದ್ಮಪ್ಪ ಪೂಜಾರಿ ಅವರು ಧ್ವಜಾರೋಹಣ ನಡೆಸಿದರು.ದಯಾನಂದ ಐತಾಳ ಅರಮನೆ ಅವರು ವಸ್ತು ಪ್ರದರ್ಶನ ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.