ಬಂಟ್ವಾಳ: ನೋಟ್ ಬ್ಯಾನ್ ಆದೇಶ ಶ್ರೀಮಂತರಿಗೆ ಲಾಭ, ಬಡವರಿಗೆ ಕಷ್ಟ ಎಂಬಂತಾಗಿದೆ. ನರೇಂದ್ರಮೋದಿ ಅವರ ತಪ್ಪು ನಿರ್ಧಾರದಿಂದ ಜನತೆ ಸಂಕಷ್ಟ ಎದುರಿಸುವಂತಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಸೋಮವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ನೀತಿಯಿಂದ ಬ್ಯಾಂಕ್ ಮುಂದೆ ಕ್ಯೂ ನಿಲ್ಲುವಂತಾಗಿದೆ. ಬ್ಯಾಂಕ್ ಬಗ್ಗೆ ನಂಬಿಕೆ ಕುಸಿಯುವಂತೆ ಆಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್. ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಮಾಯಿಲಪ್ಪ ಸಾಲಿಯಾನ್, ಅಬ್ಬಾಸ್ ಆಲಿ, ಪಕ್ಷ ಪ್ರಮುಖರಾದ ಪಿಯುಸ್ ರೋಡ್ರಿಗಸ್, ಎ.ಸಿ.ಭಂಡಾರಿ, ಅಬೂಬಕರ್, ಮಾಧವ ಮಾವೆ ಸಹಿತ ಪ್ರಮುಖ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…