ಬಂಟ್ವಾಳ

ಪುರಸಭೆ ಬಜೆಟ್ ಪೂರ್ವಭಾವಿ ಸಭೆ

ಬಂಟ್ವಾಳ: ಪುರಸಭೆಯ ಬಜೆಟ್ ಗೆ ಪೂರ್ವಭಾವಿಯಾಗಿ ಸಂಘ, ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರ ಅಭಿಪ್ರಾಯ ಸಂಗ್ರಹದ ಸಭೆ ಸೋಮವಾರ ಬಂಟ್ವಾಳ ಪುರಸಭೆಯಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ಪ್ರೊಬೆಷನರಿ ಐಎಎಸ್ ಅಧಿಕಾರಿ ಗಾರ್ಗಿ ಜೈನ್, ಬಂಟ್ವಾಳ ಅಭಿವೃದ್ಧಿಗೆ ಪೂರಕ ಸಲಹೆಗಳನ್ನ ನೀಡಿದರೆ ಮುಂದಿನ ಪುರಸಭೆ ಬಜೆಟ್ ನಲ್ಲಿ ಅಳವಡಿಸಿ, ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದರು.

ಜಾಹೀರಾತು

ಪುರಸಭಾ ವ್ಯಾಪ್ತಿಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆ, ನೀರಿನ ಶುಲ್ಕ, ವೆಂಡಿಂಗ್ ಝೋನ್, ಬಸ್ ನಿಲ್ದಾಣಕ್ಕೆ ಹೊಸ ರೂಪ, ತ್ಯಾಜ್ಯ ವಿಲೇವಾರಿಯ ಕಾರ್ಯಕ್ರಮಕ್ಕೆ ಅನುದಾನ ಮೀಸಲಿಡುವ ಕುರಿತು ಪ್ರಸ್ತಾಪಿಸಲಾಯಿತು.

ವಿವಿಧ ವಿಷಯಗಳ ಕುರಿತು ಟ್ರಾಫಿಕ್ ಎಸ್ ಐ ಚಂದ್ರಶೇಖರಯ್ಯ, ನಾಗರಿಕ ಸ್ವಯಂಸೇವಾ ಪ್ರತಿನಿಧಿಗಳಾದ ಶಿವಶಂಕರ್, ಕೆ.ಸುಂದರ ರಾವ್, ಡಾ.ರಮಾದೇವಿ, ಮಹಾಬಲೇಶ್ವರ ಹೆಬ್ಬಾರ್, ಎಸ್.ಆರ್.ಪಟವರ್ಧನ್, ವಸಂತ ಬಾಳಿಗಾ, ದಾಮೋದರ್, ಸುಭಾಶ್ಚಂದ್ರ ಜೈನ್, ಗಿರೀಶ್ ಪೈ ಬಂಟ್ವಾಳ ಮತ್ತಿತರರು ವಿಷಯ ಮಂಡಿಸಿದರು.

ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು ಪೂರಕ ಮಾಹಿತಿ ನೀಡಿದರು. ಮುಖ್ಯಾಧಿಕಾರಿ ಸುಧಾಕರ್ ಮಾತನಾಡಿ, ಪುರಸಭೆ ಅಭಿವೃದ್ಧಿ ಹಿನ್ನೆಲೆಯಲ್ಲಿ ಬಜೆಟ್ ಗೆ ಪೂರಕ ವಿಚಾರಗಳನ್ನು ಒದಸಿಗಲು ಕೋರಿದರು.

ಜಾಹೀರಾತು

ಹಿಂದಿನ ಆಯವ್ಯಯ ಪೂರ್ವ ಸಮಾಲೋಚನಾ ಸಭೆಯಲ್ಲಿ ಪತ್ರಕರ್ತರು ನೀಡಿದ್ದ ಸಲಹೆಗಳು ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ ಎಂದು ಸಭೆಯಲ್ಲಿದ್ದ ಪತ್ರಕರ್ತರು ಗಮನ ಸೆಳೆದರು.  ಸಮುದಾಯ ಅಧಿಕಾರಿ ಮತ್ತಡಿ ಹಾಗೂ ಪುರಸಭೆಯ ಇಲಾಖಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ