ಬಂಟ್ವಾಳ

ಇರಾದಲ್ಲಿ ಮಕ್ಕಳ ಗ್ರಾಮ ಸಭೆ

ಬಂಟ್ವಾಳ: ಇರಾ ಗ್ರಾಮ ಪಂಚಾಯತ್ ವತಿಯಿಂದ 2016-17ನೇ ಸಾಲಿನ ಮಕ್ಕಳ ಗ್ರಾಮ ಸಭೆಯು ಯುವಕ ಮಂಡಲ ಇರಾ ಸಭಾಭವನದಲ್ಲಿ ನಡೆಯಿತು.

ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಇರಾ ತಾಳಿತ್ತಬೆಟ್ಟು ವಿದ್ಯಾರ್ಥಿನಿ ಚೈತನ್ಯ ಅಧ್ಯಕ್ಷತೆ ವಹಿಸಿದ್ದರು.

ಜಾಹೀರಾತು

ಇರಾ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕು ಪ್ರಾಥಮಿಕ  ಶಾಲೆಗಳಾದ ತಾಳಿತ್ತಬೆಟ್ಟು, ನಡುಕೆಂಜಿಲ, ಬಾಳೆಪುಣಿ, ಪರಪ್ಪು ಇಲ್ಲಿನ ವಿಧ್ಯಾರ್ಥಿಗಳು ಪಾಲ್ಗೊಂಡು ಶಾಲೆಗಳ ಮೂಲಭೂತ ಆವಶ್ಯಕತೆಗಳ ಕುಂದು ಕೊರತೆಗಳ ಬಗ್ಗೆ ಪ್ರಸ್ತಾವನೆಗೈದರು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಬೇಡಿಕೆಗಳಿಗೆ ಸ್ಪಂದಿಸುವ  ಪೂರಕ ಮಾತುಗಳನ್ನಾಡಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಚಂದ್ರಾವತಿ,ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆಯ ಮೇಲ್ವಿಚಾರಕಿ ಗುಣವತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಎಸ್, ಪಂಚಾಯತ್ ಸದಸ್ಯರಾದ ಮೊಯ್ದಿಕುಂಞಿ, ನಳಿನಾಕ್ಷಿ , ಸವಿತಾ ಗಣ್ಯರಾದ ವಾಮನ ಪೂಜಾರಿ ಶಾಲಾ ಶಿಕ್ಷಕ ಶಿಕ್ಷಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ,ಮಂಗಳ ಗಂಗೋತ್ರಿ ಕೊಣಾಜೆ ಇಲ್ಲಿಯ ವಿದ್ಯಾರ್ಥಿಗಳು ಈ ಸಂದರ್ಭ ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿ ಗುಲಾಬಿ ಸ್ವಾಗತಿಸಿ ರಂಜನ್ ಕಾರ್ಯಕ್ರಮ ನಿರೂಪಿಸಿದರು.ಇರ್ಶಾದ್ ಧನ್ಯವಾದ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ