ಬಂಟ್ವಾಳ: ಕಳ್ಳಿಗೆ ಗ್ರಾಮದ ತಡಂಬಿಲ ಶಾಲೆಯ ಬಳಿ ಮಹಿಳೆಯ ಕತ್ತಿನಿಂದ ಚಿನ್ನದ ಸರವನ್ನು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದು ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿಸಿದೆ.
ಬೋಳಿಯಾರ್ ನಿವಾಸಿ ಅಬ್ದುಲ್ ನವಾಝ್(21) ಬಂಧಿತ ಆರೋಪಿಯಾಗಿದ್ದು ಸಜೀಪಮೂಡ ಗ್ರಾಮದ ಬೇಂಕೆ ಎಂಬಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಆತನನ್ನು ಬಂಧಿಸಲಾಗಿದೆ.
ಈತನಿಂದ ಎಗರಿಸಲಾದ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳೆದ ಭಾನುವಾರ ಸಂಜೆ ತಡಂಬಿಲ ಶಾಲೆ ಬಳಿ ಹಾಲಿನ ಡೈರಿಗೆ ಹಾಲು ಕೊಟ್ಟು ವಾಪಸ್ ಮನೆಗೆ ತೆರಳುತ್ತಿದ್ದ ರೀಟಾ ಮೊಂತೆರೋ ಎಂಬವರ ಕತ್ತಿನಿಂದ ಬೈಕ್‌ನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಚಿನ್ನದ ಸರ ಕಸಿದು ಪರಾರಿಯಾಗಿದ್ದರು.
ಜಾಹೀರಾತು
ಬಂಟ್ವಾಳ ಉಪ ವಿಭಾಗದ ಡಿವೈಎಸ್‌ಪಿ ರವೀಶ್ ಸಿ.ಆರ್. ಮಾರ್ಗದರ್ಶನದಲ್ಲಿ ಸಿಐ ಬಿ.ಕೆ.ಮಂಜಯ್ಯ ಅವರ ನೇತೃತ್ವದಲ್ಲಿ ನಗರ ಠಾಣೆಯ ಎಸ್ಸೈ ನಂದಕುಮಾರ್ ಆರೋಪಿಯನ್ನು ಬಂಧಿಸಿದ್ದು ಎಎಸ್ಸೈ ಸಂಜೀವ, ಎಚ್‌ಸಿ ಸುರೇಶ್, ಗಿರೀಶ್, ಸಂಪತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಚಿನ್ನ ಎಗರಿಸಿದ ಆರೋಪಿ ಬಂಧನ, ಮತ್ತೋರ್ವನಿಗೆ ಶೋಧ"
Be the first to comment on "ಚಿನ್ನ ಎಗರಿಸಿದ ಆರೋಪಿ ಬಂಧನ, ಮತ್ತೋರ್ವನಿಗೆ ಶೋಧ"