ಬಂಟ್ವಾಳ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸೋಮವಾರ ಬಿ.ಸಿ.ರೋಡ್ ಕೈಕಂಬ ಜಂಕ್ಷನ್‌ನಲ್ಲಿ ‘ಆಕ್ರೋಶಿತ್ ದಿವಸ್’ ಅಂಗವಾಗಿ ಪ್ರತಿಭಟನಾ ಸಭೆಯಲ್ಲಿ ಹಮ್ಮಿಕೊಳ್ಳಲಾಯಿತು.
ಪ್ರತಿಭಟನಾ ಸಭೆಯನ್ನುದ್ದೇಶಿಸಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೋಡಾಜೆ ಮಾತನಾಡಿ, ನೋಟು ಅಮಾನ್ಯದಿಂದ ದೇಶಾದದ್ಯಂತ ಜನ ಜೀವನ ಅಸ್ತವ್ಯಸ್ಥಗೊಂಡಿದೆ ಎಂದರು.
ಎಸ್‌ಡಿಪಿಐ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಸಾಹುಲ್ ಹಮೀದ್ ಎಸ್.ಎಚ್. ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಂಟ್ವಾಳ ಪುರಸಭಾ ಸದಸ್ಯ ಮುಹಮ್ಮದ್ ಇಕ್ಬಾಲ್ ಐ.ಎಮ್.ಆರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ ಮಾತನಾಡಿದರು.
ಬಂಟ್ವಾಳ ಪುರಸಭಾ ಸದಸ್ಯ ಮುನೀಶ್ ಅಲಿ, ಎಸ್‌ಡಿಪಿಐ ಪುರಸಭಾ ಸಮಿತಿ ಅಧ್ಯಕ್ಷ ಯೂಸುಫ್ ಆಲಡ್ಕ. ಪುದು ಗ್ರಾಮ ಪಂಚಾಯತ್ ಸದಸ್ಯ ಸುಲೈಮಾನ್ ಉಸ್ತಾದ್, ಕ್ಷೇತ್ರ ಸಮಿತಿ ಕಾರ್ಯದರ್ಶಿ ಇಸ್ಮಾಯೀಲ್ ಬಾವ ಉಪಸ್ಥಿತಿದ್ದರು. ಕ್ಷೇತ್ರ ಸಮಿತಿ ಸದಸ್ಯ ರಿಯಾಝ್ ಕಡಂಬು ಕಾರ್ಯಕ್ರಮ ನಿರೂಪಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…