ಯುವವಾಹಿನಿಯಿಂದ ನೇತ್ರ ತಪಾಸಣಾ ಶಿಬಿರ

ಬಂಟ್ವಾಳ: ಪ್ರತಿಯೊಬ್ಬ ಪ್ರಜೆ ಮಾನಸಿಕ, ದೈಹಿಕ, ಸಾಮಾಜಿಕ ಹಾಗೂ ಆಧ್ಯಾತ್ಮಿಕವಾಗಿ ಸ್ವಸ್ಥದಿಂದ  ಇದ್ದಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮಂಗಳೂರು ಸರಕಾರಿ ವೆನ್‌ಲಾಕ್ ಆಸ್ಪತ್ರೆಯ ನೇತ್ರ ಚಿಕಿತ್ಸಕರಾದ ಶ್ರೀಧರ ಕೆ.ವಿ. ತಿಳಿಸಿದರು.

eye-camp

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಜಿಲ್ಲಾ ವೆನ್‌ಲಾಕ್ ಸಂಚಾರಿ ನೇತ್ರ ಘಟಕ ಮತ್ತು ಕೆ..ಎಂ.ಸಿ.ಆಸ್ಪತ್ರೆ ಮಂಗಳೂರು ಇದರ ತಜ್ಞ ವೈಧ್ಯರ ಸಹಕಾರದಲ್ಲಿ ಬೆಂಜನಪದವು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿದ ಉಚಿತ ಕಣ್ಣು ಪರೀಕ್ಷಾ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಜಾಹೀರಾತು

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ.ಸೇಸಪ್ಪ ಕೋಟ್ಯಾನ್ ದೀಪ ಬೆಳಗುವುದರ ಮೂಲಕ ಶಿಬಿರ ಉದ್ಘಾಟಿಸಿದರು. ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅಮ್ಮುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರೇಮಲತಾ ಹಾಗೂ ಬೆಂಜನಪದವು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾದ ಡಾ. ಅನ್ಸಿಲ್ಲಾ ಪತ್ರಾವೊ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಶಿಬಿರದ ಸಂಚಾಲಕರಾದ ವಿಶ್ವನಾಥ ಪೂಜಾರಿ ಕಲಾ, ರೇವತಿ ಬಡಗಬೆಳ್ಳೂರು ಹಾಗೂ ಮಾರ್ಗದರ್ಶಕರಾದ ಬಿ. ದಿರೇಂದ್ರ ಉಪಸ್ಥಿತರಿದ್ದರು.

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಮಾಜಿ ಅಧ್ಯಕ್ಷರಾದ ರಾಮಚಂದ್ರ ಸುವರ್ಣ, ತಾರಾನಾಥ ಕೆ. ಹರೀಶ್. ಎಸ್ ಕೋಟ್ಯಾನ್, ಯೋಗೀಶ್ ಪೂಜಾರಿ , ರಾಜೇಶ್ ಸುವರ್ಣ, ಕೋಶಾಧಿಕಾರಿ ಸತೀಶ್ ಪೂಜಾರಿ ಬಾಯಿಲ, ಪ್ರವೀಣ್ ತುಂಬೆ ಉಪಸ್ಥಿತರಿದ್ದರು.

ಬೆಂಜನಪದವು  ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬದಿ ವರ್ಗದವರು ಶಿಬಿರಕ್ಕೆ ಸಂಪೂರ್ಣ ಸಹಕಾರ ನೀಡಿದರು.  ಒಟ್ಟು 162 ಜನ ಶಿಬಿರದ ಪ್ರಯೋಜನ ಪಡೆದರು.  124 ಮಂದಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು.

ಮಾಜಿ ಅಧ್ಯಕ್ಷರಾದ ಪ್ರೇಮನಾಥ ಕೆ. ಸ್ವಾಗತಿಸಿದರು.  ಕಾರ್ಯದರ್ಶಿ ಸುನಿಲ್ ಸುವರ್ಣ ಮರ್ದೋಳಿ ದನ್ಯವಾದ ನೀಡಿದರು. ಬಿ. ಶ್ರೀಧರ ಅಮೀನ್ ಕಾರ್‍ಯಕ್ರಮ ನಿರೂಪಿಸಿದರು.

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಯುವವಾಹಿನಿಯಿಂದ ನೇತ್ರ ತಪಾಸಣಾ ಶಿಬಿರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*