ಬಿ.ಸಿ.ರೋಡಿನಲ್ಲಿ ಗ್ರೇಟ್ ಪ್ರಭಾತ್ ಸರ್ಕಸ್

ಬಂಟ್ವಾಳ: 78 ವರ್ಷಗಳ ಇತಿಹಾಸ ಇರುವ ಕರ್ನಾಟಕದ ಏಕೈಕ ಸರ್ಕಸ್ ಕಂಪನಿ ಎಂಬ ಖ್ಯಾತಿಯ ಗ್ರೇಟ್ ಪ್ರಭಾತ್ ಸರ್ಕಸ್ ಬಿ.ಸಿ.ರೋಡಿನಲ್ಲಿ ಶುಕ್ರವಾರ ಪ್ರದರ್ಶನ ಆರಂಭಿಸಲಿದೆ.ಶುಕ್ರವಾರ ಪ್ರದರ್ಶನದ ಉದ್ಘಾಟನೆ ಸಂಜೆ 7 ಗಂಟೆಗೆ ನಡೆಯಲಿದ್ದು, ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು.

circus3

ಅಧ್ಯಕ್ಷತೆಯನ್ನು ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ವಹಿಸುವರು. ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ,ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಅತಿಥಿಗಳಾಗಿರುವರು ಎಂದು ಸುದ್ದಿಗೋಷ್ಠಿಯಲ್ಲಿ ಕಂಪನಿಯ ಮಾಲೀಕ ಸಾಯಿಬಾಬಾ ತಿಳಿಸಿದರು.  ಒಟ್ಟು 40 ದಿನ ಪ್ರದರ್ಶನಗಳು ನಡೆಯಲಿವೆ ಎಂದು ಅವರು ಹೇಳಿದರು.circus2

ಜಾಹೀರಾತು

circus4

ಸರಕಾರದ ಯಾವುದೇ ಅನುದಾನ ಇಲ್ಲದೆ, ನೆರವೂ ಇಲ್ಲದೆ ಕಂಪನಿಯನ್ನು ನಡೆಸುತ್ತಿರುವುದು ಕೇವಲ ಕಲಾಪ್ರೀತಿಯಿಂದ. ಸರ್ಕಸ್ ಇದೀಗ ಅಳಿವಿನಂಚಿನಲ್ಲಿದ್ದು, ಜನರ ಪ್ರೋತ್ಸಾಹ ಅಗತ್ಯ ಎಂದು ಅವರು ಹೇಳಿದರು.

ಪ್ರತಿದಿನ 1, 4 ಮತ್ತು 7 ಗಂಟೆಗೆ ಪ್ರದರ್ಶನ ಇರಲಿದೆ. 150ಕ್ಕೂ ಅಧಿಕ ಕಲಾವಿದರು ಗ್ಲೋಬ್ ರೈಡಿಂಗ್, ಜಿಮ್ನಾಸ್ಟಿಕ್ಸ್, ಫ್ಲೈಯಿಂಗ್ ಟ್ರೋಪೀಸ್, ಮೋಟರ್ ಬೈಕ್ ಜಂಪಿಂಗ್, ಸ್ಕೈವಾಕ್, ಬೇಬಿ ರೋಪ್, ಸೈಕಲ್ ಬ್ಯಾಲನ್ಸ್, ಜೋಕರ್ಸ್ ಕಾಮಿಡಿ, ಪ್ರಾಣಿಗಳ ವಿವಿಧ ಕಸರತ್ತುಗಳು ಪ್ರದರ್ಶನಗೊಳ್ಳಲಿವೆ ಎಂದರು.

ಜಾಹೀರಾತು

ವಾರದ ನಂತರ ಶಾಲಾ ಮಕ್ಕಳಿಗೆ ಪ್ರದರ್ಶನದಲ್ಲಿ ರಿಯಾಯತಿ ನೀಡಲಾಗುವುದು ಎಂದರು.ಮ್ಯಾನೇಜರ್ ದೇವರಾಜ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

circus1

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಬಿ.ಸಿ.ರೋಡಿನಲ್ಲಿ ಗ್ರೇಟ್ ಪ್ರಭಾತ್ ಸರ್ಕಸ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*