ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ ಬೋಳಂಗಡಿ ಯುವಕ

ಬಂಟ್ವಾಳ: ಒಬ್ಬನೇ ಪುತ್ರನಾಗಿ ತಂದೆ, ತಾಯಿಗೆ ಆಧಾರಸ್ತಂಭವಾಗಿದ್ದ ಪಾಣೆಮಂಗಳೂರು ಸಮೀಪ ಬೋಳಂಗಡಿ ನಿವಾಸಿ ಸುದರ್ಶನ ಶೆಣೈ ಅಪಘಾತಕ್ಕೆ ಬಲಿಯಾಗಿದ್ದಾರೆ.

sudershan-shenoy-bnt-accd-death
ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೆಲ್ಕಾರ್ ಸಮೀಪದ ಬೋಳಂಗಡಿ ನಿವಾಸಿ ದೇವದಾಸ್ ಶೆಣೈ ಅವರ ಪುತ್ರ ಸುದರ್ಶನ್ ಶೆಣೈ(28) ಪುತ್ತೂರಿನಿಂದ ಮಂಗಳೂರಿಗೆ ತನ್ನ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದ್ದು ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ.

accident
ಮೂಲತ ಬೋಳಂಗಡಿ ನಿವಾಸಿಯಾಗಿರುವ ಮೃತ ಸುದರ್ಶನ್ ತಂದೆ ಹಾಗೂ ತಾಯಿ ಪುತ್ತೂರಿನಲ್ಲಿ ವಾಸ್ತವ್ಯವಿದ್ದಾರೆ. ಸುದರ್ಶನ್ ಮಂಗಳೂರಿನ ಸಿಟಿ ಸೆಂಟರ್‌ನಲ್ಲಿರುವ ಐಡಿಯಲ್ ಐಸ್‌ಕ್ರೀಂ ಪಾರ್ಲರ್‌ನಲ್ಲಿ ನೌಕರಿ ಹೊಂದಿದ್ದಾನೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಕೆಲಸಕ್ಕೆಂದು ಪುತ್ತೂರಿನಿಂದ ಮಂಗಳೂರಿಗೆ ತನ್ನ ಬೈಕ್‌ನಲ್ಲಿ ಹೊರಟಿದ್ದು ಕುದ್ರೆಬೆಟ್ಟು ತಲುಪಿದಾಗ ಈ ಅಪಘಾತ ಸಂಭವಿಸಿದೆ. ಘಟನೆಯ ಸುದ್ದಿ ತಿಳಿದ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಧಾವಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಮುಂದಿನ ಕ್ರಮ ಕೈಗೊಂಡರು.

ಜಾಹೀರಾತು

img-20161201-wa0020
ದೇವದಾಸ ಶೆಣೈ ಇಬ್ಬರು ಮಕ್ಕಳ ಪೈಕಿ ಸುದರ್ಶನ್ ಓರ್ವನೇ ಪುತ್ರನಾಗಿದ್ದು ತಂದೆ ತಾಯಿಗೆ ಆಧಾರ ಸ್ತಂಭನಾಗಿದ್ದ. ಇವರ ಸಹೋದರಿಯನ್ನು ಮೆಲ್ಕಾರಿನ ಸಾಮಾಜಿಕ ಕಾರ್ಯಕರ್ತ ರವಳನಾಥ್ ಎಂಬವರಿಗೆ ವಿವಾಹ ಮಾಡಿಕೊಡಲಾಗಿದೆ.
ಸುದರ್ಶನ್ ಅವರ ಅಕಾಲಿಕ ಸಾವಿನಿಂದ ಮೆಲ್ಕಾರ್ ಪರಿಸರದಲ್ಲಿ ಸೂತಕದ ಛಾಯೆ ಆವರಿಸಿದೆ. ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಬಳಿಕೆ ಭಾವ ರವಳನಾಥ್ ಅವರ ನಿವಾಸಕ್ಕೆ ತರಲಾಯಿತು.

0112btlph2b-sudrshan-sgenoy-with-dad-and-mummy

ತಂದೆ, ತಾಯಿಯೊಂದಿಗೆ ಇದ್ದ ಸಂದರ್ಭ

ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಬಿಜೆಪಿ ಮುಖಂಡ ರಾಜೇಶ್ ನಾಯಕ್ ಉಳಿಪಾಡಿ ಗುತ್ತು, ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ ಮೊದಲಾದವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನವನ್ನು ಪಡೆದರು.
ಘಟನೆಯ ಬಗ್ಗೆ ಬಂಟ್ವಾಳ ಟ್ರಾಫಿಕ್ ಠಾಣೆಯ ಎಸ್ಸೈ ಚಂದ್ರಶೇಖರಯ್ಯ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ ಬೋಳಂಗಡಿ ಯುವಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*