ಮಂಗಳೂರು: ಮೀನುಗಾರಿಕೆ ಮಹಾವಿದ್ಯಾಲಯ, ಮಂಗಳೂರಿನಲ್ಲಿ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಎಚ್.ಶಿವಾನಂದಮೂರ್ತಿ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನ ಕುಲಸಚಿವರನ್ನಾಗಿ ನೇಮಕಗೊಂಡು ಪ್ರಭಾರ ವಹಿಸಿಕೊಂಡಿರುತ್ತಾರೆ.
ಹಿಂದೆ ವಿಶ್ವವಿದ್ಯಾಲಯ ವಿಸ್ತರಣಾ ನಿರ್ದೇಶಕ 4 ವರ್ಷಗಳ ಸೇವೆ ಸಲ್ಲಿಸಿ ವಿಶ್ವವಿದ್ಯಾಲಯದ ವಿಸ್ತರಣಾ ಚಟುವಟಿಕೆಗಳನ್ನು ನಿರ್ವಹಿಸಿರುತ್ತಾರೆ. ಡಾ.ಎಚ್.ಶಿವನಾಂದಮೂರ್ತಿ ಹೊರ ಮೂಲದ ಅನುದಾನದ ಪಡೆದು ಸುಮಾರು 14 ಸಂಶೋಧನಾ ಯೋಜನೆಗಳಿಗೆ ಪ್ರಿನ್ಸಿಪಾಲ್ ಇನವೆಸ್ಟೀಗೇಟರ್ ಆಗಿ ಸೇವೆ ಸಲ್ಲಿಸಿರುತ್ತಾರೆ ಹಾಗೂ 36 ಸ್ನಾತಕೋತ್ತರ ಪಿ.ಎಚ್.ಡಿ. ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದು ಸುಮಾರು 200 ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿರುತ್ತಾರೆ. ಹಲವಾರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಅವಾರ್ಡಗಳನ್ನು ಪಡೆದಿರುತ್ತಾರೆ. ಜವಹಾರಲಾಲ್ ನೆಹರು ಪ್ರಶಸ್ತಿ, ಭಾರತ ಸರ್ಕಾರ, ಸರ್ ಸಿ.ವಿ.ರಾಮನ್ ಪ್ರಶಸ್ತಿ, ಕರ್ನಾಟಕ ಸರ್ಕಾರ, ಅಲ್ಲದೆ ಇತರೆ ಪ್ರಶಸ್ತಿಗಳನ್ನು ಸ್ವೀಕರಿಸಿರುತ್ತಾರೆ. ಪ್ರಸ್ತುತ ಕರ್ನಾಟಕ ಜೀವ ವೈವಿದ್ಯ ಮಂಡಳಿಯ ಸದಸ್ಯರು ಹಾಗೂ ರಾಷ್ಟ್ರೀಯ ಯೋಜನಾ ಆಯೋಗ ಸಮಿತಿಯ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ ಅಡಿಯಲ್ಲಿ 7 ಪಶುವೈದ್ಯಕೀಯ ಮಹಾವಿದ್ಯಾಲಯ, 2 ಹೈನು ತಾಂತ್ರಿಕ ಮಹಾವಿದ್ಯಾಲಯ ಹಾಗೂ1 ಮೀನುಗಾರಿಕೆ ಮಹಾವಿದ್ಯಾಲಯ, ಜೊತೆಗೆ ಪಶು ಅರೋಗ್ಯ ಮತ್ತು ಜೈವಿಕ ಸಂಸ್ಥೆ, ಹೆಬ್ಬಾಳ-ಬೆಂಗಳೂರು ಹಾಗೂ ಅದರ ಸುಮಾರು ಹನ್ನೇರಡು ಅಂಗಸಂಸ್ಥೆಗಳಾದ ಪಶು ರೋಗ ತನಿಖಾ ಪ್ರಯೋಗಾಲಯ ಮತ್ತು ಮಾಹಿತಿ ಕೇಂದ್ರಗಳು ಹಾಗೂ 10 ಸಂಶೋಧನಾ ಮತ್ತು ವಿಸ್ತರಣ ಕೇಂದ್ರಗಳು ವಿಶ್ವವಿದ್ಯಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ ಮತ್ತು 2 ಪಶುಸಂಗೋಪನಾ ಪಾಲಿಟೆಕ್ನಿಕ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ.