ಬಂಟ್ವಾಳ: ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಎಲೋಶಿಯಸ್ ಪಾವ್ಲ್ ಡಿಸೋಜ ಅವರು ಗುರುದೀಕ್ಷೆಯನ್ನು ಪಡೆದು 50 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅವರ ಹುಟ್ಟೂರಾದ ಬಂಟ್ವಾಳದ ಅಗ್ರಾರ್ ಚರ್ಚ್‌ನಲ್ಲಿ ಡಿ. 4ರಂದು ನಡೆಯಲಿರುವ ಸುವರ್ಣ ಮಹೋತ್ಸವ ಸಂಭ್ರಮದ ಪ್ರಯುಕ್ತ ಹೊರ ಕಾಣಿಕೆ ಮೆರವಣಿಗೆಯು ಶುಕ್ರವಾರ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ಬೈಪಾಸ್ ರಸ್ತೆಯ ಮೂಲಕ ಸಾಗಿ ಅಗ್ರಾರ್ ಚರ್ಚ್‌ನಲ್ಲಿ ಸಂಪನ್ನಗೊಂಡಿತು.
ಗೇರು ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್ ಮೆರವಣಿಗೆಗೆ ಚಾಲನೆ ನೀಡಿದರು. ಬಂಟ್ವಾಳ ವಲಯ ಪ್ರಧಾನ ಧರ್ಮಗುರು ಮ್ಯಾಕ್ಸಿಂ ಎಲ್. ನೊರೋನ, ವಲಯ ಕಾರ್ಯದರ್ಶಿ ವಿಕ್ಟರ್ ಮೆನೆಜಸ್, ಅಗ್ರಾರ್ ಚರ್ಚ್‌ನ ಧರ್ಮ ಗುರು ಗ್ರೆಗರಿ ಡಿಸೋಜ, ಸುವರ್ಣ ಮಹೋತ್ಸವ ಸಮಿತಿಯ ಸಂಚಾಲಕ ಪಿಯೂಸ್ ರೋಡ್ರಿಗಸ್, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪ್ರಚಾರ ಸಮಿತಿ ಸಂಚಾಲಕ ವಿನ್ಸೆಂಟ್ ಕಾರ್ಲೋ, ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಬೊಂಬೆ ಕುಣಿತ, ಬ್ಯಾಂಡ್, ವಾದ್ಯಗೋಷ್ಠಿ ಮೆರವಣಿಗೆಗೆ ಮೆರಗು ನೀಡಿತು.