ಬಂಟ್ವಾಳ: ಮನುಷ್ಯನ ಬದುಕು ರೂಪಿಸುವಲ್ಲಿ ಶಿಕ್ಷಣದ ಪಾತ್ರ ಹಿರಿದಾದುದು. ತಂತ್ರಜ್ಞಾನ ಕೇಂದ್ರಿತ ವ್ಯವಸ್ಥೆಯು ವಿದ್ಯಾರ್ಥಿಗಳಿಗೆ ಅನೇಕ ಸವಾಲುಗಳನ್ನು ಮುಂದಿಡುತ್ತಿದೆ. ಎಂದು ಉಜಿರೆ ಎಸ್.ಡಿ.ಎಮ್ ರೆಸಿಡೆನ್ಸಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪ.ಪೂ ಕಾಲೇಜಿನಲ್ಲಿ ನಡೆದ ಶಿಕ್ಷಕ -ರಕ್ಷಕ ಸಂಘದ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಎಸ್.ವಿ.ಎಸ್ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಪಾಂಡುರಂಗ ನಾಯಕ್ ಶುಭಶಂಸನೆಗೈದರು.ಎಸ್.ವಿ.ಎಸ್ ಕಾಲೇಜುಗಳ ಸಂಚಾಲಕ ಶ್ರೀ ಕೂಡಿಗೆ ಪ್ರಕಾಶ್ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ., ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಾಲಕೃಷ್ಣ ಗೌಡ ಉಪಸ್ಥಿತರಿದ್ದರು. ಶಿಕ್ಷಕ-ರಕ್ಷಕ ಸಂಘದ ಕೋಶಾಧಿಕಾರಿ ಶಂಕರ್ ಪಿ., 2015-16 ನೇ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. 2015-16ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯಲ್ಲಿ ಅತ್ಯುನ್ನತ ಅಂಕಗಳನ್ನು ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
2016-17 ನೇ ಸಾಲಿನ ಶಿಕ್ಷಕ -ರಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ನೂತನ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷರಾಗಿ ರೋನಾಲ್ಡ್ ಡಿ’ಸೋಜ ಮತ್ತು ಕೋಶಾಧಿಕಾರಿಯಾಗಿ ಕೃಷ್ಣ ನಾಯಕ್ ಬಿ. ಆಯ್ಕೆಯಾದರು. ಶ್ವೇತಾ ಮತ್ತು ಶ್ರೇಯಾ ಆಶಯ ಗೀತೆ ಹಾಡಿದರು. ಉಪನ್ಯಾಸಕಿ ರಂಜಿತಾ ಸ್ವಾಗತಿಸಿ, ಚೈತ್ರ ವಂದಿಸಿದರು. ಉಪನ್ಯಾಸಕಿ ಭಾರತಿ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕಿ ಶಾಲಿನಿ ಬಿ. ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರವೇರಿಸಿದರು. ಉಪನ್ಯಾಸಕ ಚೇತನ್ ಮುಂಡಾಜೆ ಕಾರ್ಯಕ್ರಮ ನಿರ್ವಹಿಸಿದರು.